ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಹೆಚ್ಚಳ; ಕರ್ನಾಟಕ-ಕೇರಳ ಗಡಿಯಲ್ಲಿ ಹೆಲ್ತ್ ಚೆಕ್ ಪೋಸ್ಟ್

|
Google Oneindia Kannada News

ಮಂಗಳೂರು, ಫೆಬ್ರವರಿ 19; ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ.

ಕೇರಳದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 10,21,433 ಆಗಿದೆ. ದೇಶದಲ್ಲಿಯೇ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕೇರಳ 2ನೇ ಸ್ಥಾನದಲ್ಲಿದೆ. ಕೇರಳದಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ ಕರ್ನಾಟಕ-ಕೇರಳ ಗಡಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸತತ ಎರಡನೆಯ ದಿನವೂ ಏರಿಕೆಯಾದ ಕೋವಿಡ್ ಪ್ರಕರಣಸತತ ಎರಡನೆಯ ದಿನವೂ ಏರಿಕೆಯಾದ ಕೋವಿಡ್ ಪ್ರಕರಣ

ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿ ಅನ್ವಯ ಈಗ ಅಂತರರಾಜ್ಯ ಸಂಚಾರವನ್ನು ನಿಷೇಧಿಸುವಂತಿಲ್ಲ. ಆದ್ದರಿಂದ, ದಕ್ಷಿಣ ಕನ್ನಡ ಜಿಲ್ಲಾಡಳಿತ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಕೇರಳದಿಂದ ಜಿಲ್ಲೆಗೆ ಬರುವ ಜನರ ಮೇಲೆ ನಿಗಾ ಇಟ್ಟಿದೆ.

ಕರ್ನಾಟಕದಲ್ಲಿ 378 ಹೊಸ ಕೋವಿಡ್ ಪ್ರಕರಣ ದಾಖಲು ಕರ್ನಾಟಕದಲ್ಲಿ 378 ಹೊಸ ಕೋವಿಡ್ ಪ್ರಕರಣ ದಾಖಲು

Dakshina Kannada Raise In COVID Case Health Check Post In Karnataka-Kerala Border

ಆರೋಗ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಗಳು ಸೇರಿ ಗಡಿಭಾಗದಲ್ಲಿ ಅಗತ್ಯ ಎಚ್ಚರಿಕೆ ಕೈಗೊಳ್ಳಲಿವೆ. ತಲಪಾಡಿ ಚೆಕ್ ಪೋಸ್ಟ್‌ನಲ್ಲಿ ಹೆಲ್ತ್ ಚೆಕ್ ಪೋಸ್ಟ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ. ಇಲ್ಲಿ ಕೇರಳದಿಂದ ಬರುವ ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ.

ಕೇರಳದಿಂದ ಬರುವವರಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿಕೇರಳದಿಂದ ಬರುವವರಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ

ಪ್ರಾಯೋಗಿಕವಾಗಿ ತಲಪಾಡಿಯಲ್ಲಿ ಹೆಲ್ತ್ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗುತ್ತದೆ. ಬಳಿಕ ಜಾಲ್ಸೂರು, ಅಡ್ಯನಡ್ಕ್ ಚೆಕ್ ಪೋಸ್ಟ್‌ಗಳಲ್ಲಿಯೂ ಇಂತಹ ವ್ಯವಸ್ಥೆಯನ್ನು ಜಾರಿಗೊಳಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

ಫೆಬ್ರವರಿ 22ರಿಂದ ಕೇರಳದಿಂದ ಬರುವವರು ಕೋವಿಡ್ ನೆಗೆಟೀವ್ ಪ್ರಮಾಣ ಪತ್ರವನ್ನು ಹೊಂದಿದ್ದರೂ ಗಡಿಯಲ್ಲಿ ತಪಾಸಣೆ ಮಾಡಲಾಗುತ್ತದೆ. ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದರೆ ಅವರನ್ನು ವಾಪಸ್ ಕಳಿಸಲಾಗುತ್ತದೆ.

ಕೇರಳದ ವಿದ್ಯಾರ್ಥಿಗಳು ಹೆಚ್ಚಿರುವ ಶಿಕ್ಷಣ ಸಂಸ್ಥೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಅವರ ನೇತೃತ್ವದ ತಂಡ ದಿಢೀರ್ ಭೇಟಿ ನೀಡಿ, ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಪರಿಶೀಲನೆ ನಡೆಸಲಿದೆ.

ಗುರುವಾರದ ವರದಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 34,266. ಸಕ್ರಿಯ ಪ್ರಕರಣಗಳ ಸಂಖ್ಯೆ 250.

English summary
Dakshina Kannada district administration to set up health check post in Talapady Karnataka-Kerala border after new COVID cases number raised in Kerala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X