• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾ.9ರಂದು ಮಂಗಳೂರಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ

|

ಮಂಗಳೂರು, ಮಾರ್ಚ್ 07: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ಆರಂಭಿಸಿವೆ.

ಕಾಂಗ್ರೆಸ್ ಹಾಗೂ ಬಿಜೆಪಿ ಚುನಾವಣೆಗೆ ಅಖಾಡ ಸಿದ್ಧಪಡಿಸುತ್ತಿದ್ದು, ಕಾಂಗ್ರೆಸ್ ನಿನ್ನೆ ಪರಿವರ್ತನಾ ಯಾತ್ರೆ ಹಮ್ಮಿಕೊಂಡು ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದೆ. ಈ ನಡುವೆ ಬಿಜೆಪಿ ಕೂಡ ಬೂತ್ ಮಟ್ಟದಿಂದಲೇ ಬಿರುಸಿನ ಚಟುವಟಿಕೆ ಆರಂಭಿಸಿದೆ.

ಮೋದಿ ಚೌಕಿದಾರ್ ಅಲ್ಲ, ಭ್ರಷ್ಟಾಚಾರದಲ್ಲಿ ಭಾಗೀದಾರ್: ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಾರ್ಚ್ 09 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ನಗರದ ಕೇಂದ್ರ ಮೈದಾನದಲ್ಲಿ ಏರ್ಪಡಿಸಿರುವ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ಬಿಜೆಪಿ ಕ್ಲಸ್ಟರ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಲಿದ್ದಾರೆ.

ಮೋದಿ ಸರಕಾರಕ್ಕೆ ಹೊಸ ಟ್ಯಾಗ್ ಲೈನ್ ನೀಡಿದ ರಾಹುಲ್ ಗಾಂಧಿ

ಪ್ರಮುಖರು, ಸಹ ಪ್ರಮುಖರು, ಬೂತ್‌ ಮಟ್ಟದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪ್ರಭಾರಿಗಳು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ರಾಜ್ಯದ ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕಾರಿಣಿ ಸದಸ್ಯರು, ರಾಜ್ಯ ಬಿಜೆಪಿ ನಾಯಕರು ಸಹಿತ ಸುಮಾರು 10 ಸಾವಿರ ಮಂದಿ ಈ ಕ್ಲಸ್ಟರ್‌ ಮಟ್ಟದ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಂತರ ನಗರದ ಡಾ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಏರ್ಪಡಿಲಾಗಿರುವ ಇಂಟೆಲೆಕ್ಚುವಲ್ ಮೀಟ್‌ ನಲ್ಲಿ ರಾಜನಾಥ್ ಸಿಂಗ್‌ ಪಾಲ್ಗೊಳ್ಳಲಿದ್ದಾರೆ.

English summary
Central Home minister Rajnath singh going to visit Mangaluru on March 09. He will address the BJP cluster level activists conference.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X