ಬೆಳ್ತಂಗಡಿಗೆ ಸೋಮವಾರ ಕೇಂದ್ರ ಗೃಹ ಸಚಿವ ರಾಜನಾಥ್ ಭೇಟಿ
ಮಂಗಳೂರು, ಏಪ್ರಿಲ್ 22: ಮುಂಬರುವ ಚುನಾವಣೆಗೆ ರಾಜಕೀಯ ಪಕ್ಷಗಳ ಅಬ್ಬರದ ಪ್ರಚಾರ ರಾಜ್ಯದಲ್ಲಿ ಆರಂಭವಾಗಿದೆ. ಚುನಾವಣಾ ಪ್ರಚಾರಕ್ಕೆ ಸ್ಟಾರ್ ಕ್ಯಾಂಪೇನರ್ ಗಳ ದಂಡೇ ಹರಿದು ಬರುತ್ತಿದೆ.
ಈ ನಡುವೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕರಾವಳಿಯ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಆಗಮಿಸಲಿರುವ ರಾಜನಾಥ್ ಸಿಂಗ್ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಳ್ತಂಗಡಿಯಲ್ಲಿ ಭರದ ಸಿದ್ಧತೆ ನಡೆಸಲಾಗಿದೆ.
ಬೆಳ್ತಂಗಡಿಯ ತಾಲೂಕು ಮೈದಾನದಲ್ಲಿ ಹೆಲಿಕಾಪ್ಟರ್ ಇಳಿಸಲು ಸಿದ್ದತೆ ನಡೆಸಲಾಗಿದೆ. ರಾಜನಾಥ್ ಸಿಂಗ್ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರಲಿದ್ದಾರೆ. ನಂತರ ಪೂಂಜಾ ಪರ ಪ್ರಚಾರ ನಡೆಸಲಿದ್ದು, ಸಂತೆಕಟ್ಟೆ ಬಳಿಯ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿರುವ ಸಭಾ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.

ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕಾಗಿ ಮೇ 1ರಂದು ಉಡುಪಿಗೆ ಆಗಮಿಸಲಿದ್ದಾರೆ. ಅಂದು ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿದ್ದು, ಮೋದಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅದರಂತೆ ಮೇ 7 ರಂದು ಮೋದಿ ಮಂಗಳೂರಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ .












Click it and Unblock the Notifications