Get Updates
Get notified of breaking news, exclusive insights, and must-see stories!

Ram mandir inauguration: ಮಂಗಳೂರಿನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಹೇಗಿದೆ ಗೊತ್ತಾ?

ಮಂಗಳೂರು, ಜನವರಿ, 21: ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಮಂದಿರ ಉದ್ಘಾಟನೆ ಹಿನ್ನೆಲೆ ಮಂಗಳೂರಿನ ದೇವಸ್ಥಾನ ಹಾಗೂ ಮಂದಿರಗಳು ಸೇರಿದಂತೆ 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

 Ram mandir inauguration: Know how is tight police security in Mangaluru?

* 131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
* ನಗರದಾದ್ಯಂತ 57 ಸೆಕ್ಟರ್ ಮೊಬೈಲ್‌ಗಳನ್ನು 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆ ಮಾಡಲಾಗಿದೆ.
* 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್‌ಗಳನ್ನು ನಿಯೋಜಿಸಲಾಗಿದೆ.
* ನಗರಾದ್ಯಂತ 9 ಸಿ.ಎ.ಆರ್ ಮತ್ತು 3 ಕೆಎಸ್‌ಆಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
* ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ.
* ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿದ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.
* ರಾಜ್ಯದಲ್ಲಿ ಅಳವಡಿಸಲಾಗಿರುವ ಕ್ರಮದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ‍್ಯಾಲಿಗಳಿಗೆ ಅನುಮತಿಸಿಲ್ಲ.
* ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಎಸಿಪಿಯವರ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿರುತ್ತದೆ.
* ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ.
* ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾಧಿಸಿ ಫ್ಲೆಕ್ಸ್, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ. ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ.
* ಜನವರಿ 21ರ ಮಧ್ಯರಾತ್ರಿಯಿಂದ ಜನವರಿ 23ರ ಮುಂಜಾನೆವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಾರ್‌ಗಳು ಹಾಗೂ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
*ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ ಮೂವರು ಡಿಸಿಪಿಗಳು, ಆರು ಎಸಿಪಿಗಳು, 11 ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಮತ್ತು 37 ಪಿಎಸ್ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+