ಸಚಿವ ರಮಾನಾಥ ರೈ ಆಪ್ತನ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ
ಬಂಟ್ವಾಳ, ಮೇ 11: ಬುಧವಾರ ರಮಾನಾಥ ರೈ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಇದೀಗ ಇನ್ನೋರ್ವ ಆಪ್ತ, ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ನುಗ್ಗಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಚಿವ ರಮಾನಾಥ್ ರೈ ಆಪ್ತ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯರಾಗಿರುವ ಸಂಜೀವ ಪೂಜಾರಿಯ ಮನೆ ಮೇಲೆ ಗುರುವಾರ ತಡ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಸಂಜೀವ ಪೂಜಾರಿ ಮತ್ತು ಅವರ ಪತ್ನಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಅಲ್ಲದೇ ಮನೆಯ ಸಾಮಾಗ್ರಿಗಳು ಮತ್ತು ಬಿಎಂಡಬ್ಲ್ಯೂ ಕಾರನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಡೆಯಲು ಬಂದ ಇತರ ಮೂವರ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣ ರಾಜಕೀಯ ತಿರುವನ್ನು ಪಡೆದುಕೊಂಡಿದೆ. ಸಚಿವ ರಮಾನಾಥ ರೈ ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಹಲ್ಲೆಗೆ ಗುರಿಯಾದ ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಬಾರ್ ಹೊಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications