'ಬಿಜೆಪಿ ಕಾರ್ಯಕರ್ತರ ಮನೇಲಿ ಬೇಯುತ್ತಿರುವುದು ಅನ್ನ ಭಾಗ್ಯದ ಅಕ್ಕಿ'
ಮಂಗಳೂರು, ಏಪ್ರಿಲ್ 08:ರಸ್ತೆಯಲ್ಲಿ ಮೋದಿ ಮೋದಿ ಎಂದು ಕೂಗುವ ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ಬೇಯುತ್ತಿರುವುದು ರಾಜ್ಯ ಸರಕಾರದ ಅನ್ನ ಭಾಗ್ಯದ ಅಕ್ಕಿ ಎಂದು ಮಾಜಿ ಸಚಿವ ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬಂಟ್ವಾಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಈ ಬಾರಿಯ ಚುನಾವಣಾ ಪ್ರಚಾರಕ್ಕೆ ವಿಷಯವೇ ಇಲ್ಲ. ಅವರು ಕೇವಲ 'ಮತ್ತೊಮ್ಮೆ ಮೋದಿ. ಮತ್ತೊಮ್ಮೆ ಮೋದಿ' ಎಂದು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಅವರ ಮನೆಯಲ್ಲಿ ಬೇಯುತ್ತಿರುವುದು ಮಾತ್ರ ಈ ಹಿಂದಿನ ಸಿದ್ದರಾಮಯ್ಯ ಸರಕಾರದ ಅನ್ನಭಾಗ್ಯದ ಅಕ್ಕಿ ಎಂದು ಕಿಡಿಕಾರಿದರು.
ಈ ಚುನಾವಣೆ ಯಾರೊಬ್ಬರ ಶಕ್ತಿ ಪ್ರದರ್ಶನವಲ್ಲ. ದೇಶದ ಭವಿಷ್ಯವನ್ನು ರೂಪಿಸುವ ಮತ್ತು ತೀರ್ಮಾನ ಮಾಡುವ ಚುನಾವಣೆ. ಈ ದೇಶಕ್ಕೆ ಯಾರು ಬೇಕು? ಯಾರು ಬೇಡ? ಎಂಬ ನಿರ್ಧಾರವನ್ನು ಮುಂದಿಟ್ಟುಕೊಂಡು ಈ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದೇ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ರಮಾನಾಥ್ ರೈ, ನರೇಂದ್ರ ಮೋದಿ ಬರಲೂಬಾರದು, ಒಂದು ವೇಳೆ ಬಂದರೆ ಅದರಿಂದ ದೇಶದ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ ಖಂಡಿತ ಎಂದು ಆತಂಕ ವ್ಯಕ್ತಪಡಿಸಿದರು.
ಈ ಚುನಾವಣೆ ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ನರೇಂದ್ರ ಮೋದಿ ಸಮಾಜವನ್ನು ವಿಭಜಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ದೇಶದ ಪ್ರಧಾನಿಯೇ ಸಮಾಜವನ್ನು ಒಡೆಯುವ ಹೇಳಿಕೆ ನೀಡಿದರೆ ಈ ಸಮಾಜ ಎಲ್ಲಿಗೆ ಹೋಗಿ ತಲುಪಬಹುದು ಎಂದು ರಮಾನಾಥ್ ರೈ ಪ್ರಶ್ನಿಸಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications