'ಹಿಂದೂ ಕಾರ್ಯಕರ್ತರ ಹತ್ಯೆಗೆ ಸಚಿವ ರಮಾನಾಥ್ ರೈ ಕಾರಣ'
ಮಂಗಳೂರು, ಸೆಪ್ಟೆಂಬರ್ 06 : 'ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಹತ್ಯೆಗೆ ಇಲ್ಲಿಯ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಕಾರಣ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ಮಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಮಂಗಳೂರು ಚಲೋ ಪ್ರತಿಭಟನಾ ಬೈಕ್ ಜಾಥಾ ಹಾಗೂ ಸಭೆ ನಿಗದಿಯಾದಂತೆ ನಡೆದೇ ನಡೆಯುತ್ತದೆ. ನಮ್ಮ ಹೋರಾಟವನ್ನು ನಿಲ್ಲಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ' ಎಂದು ಸ್ಪಷ್ಟಪಡಿಸಿದರು.

'ಬಿಜೆಪಿ ಯುವ ಮೋರ್ಚಾದ ಮಂಗಳೂರು ಚಲೋ ಜಾಥಾ, ನಿಗದಿತ ಕಾರ್ಯಕ್ರಮ ನಡೆದೇ ನಡೆಯುತ್ತದೆ. ರಾಜ್ಯದಲ್ಲಿ ಈ ವರೆಗೆ 24ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗೆ ಇಲ್ಲಿಯ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಕಾರಣ' ಎಂದು ಕಿಡಿಕಾರಿದರು.
'ಸಚಿವ ರಮಾನಾಥ್ ರೈ ನಿರ್ಲಕ್ಷ್ಯದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದೆ. ರಮಾನಾಥ್ ರೈ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು .












Click it and Unblock the Notifications