ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿಗೆ 10 ವರ್ಷ ಕಠಿಣ ಸಜೆ ನೀಡಿದ ಮಂಗಳೂರು ನ್ಯಾಯಾಲಯ

ಮಂಗಳೂರು, ಆಗಸ್ಟ್ 23: ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿಯಾಗಿಸಿದ್ದ ಆರೋಪಿಗೆ ನ್ಯಾಯಾಲಯವು 10 ವರ್ಷ ಕಠಿಣ ಸಜೆ ಮತ್ತು ಐದು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಈ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ಆರೋಪಿಗೆ ಸಜೆ ನೀಡಿ ತೀರ್ಪು ನೀಡಿದೆ.

ಮೂಲತಃ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗಂತುಗೊಳ ನಿವಾಸಿ ನಾಗಪ್ಪ (25) ಶಿಕ್ಷೆಗೆ ಗುರಿಯಾದ ಆರೋಪಿ. ಈತ 2016ರ ಅ. 21ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಆರೋಪಿ ಪದೇಪದೇ ಆಕೆಯ ಮನೆಗೆ ತೆರಳಿ ಅತ್ಯಾಚಾರವೆಸಗಿದ್ದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು.

Rape Accused Sentenced 10 Years In Jail

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿಯನ್ನು ವೈದ್ಯರ ಬಳಿ ತಪಾಸಣೆಗೆ ಕರೆದುಕೊಂಡು ಹೋದಾಗ ಆಕೆ ಗರ್ಭಿಣಿ ಎಂಬ ವಿಚಾರ ಬಯಲಾಗಿದೆ. ಈ ಸಂದರ್ಭ ಆಕೆಯನ್ನು ವಿಚಾರಣೆ ನಡೆಸಿದಾಗ ಅತ್ಯಾಚಾರ ನಡೆದ ವಿಷಯವನ್ನು ಬಾಲಕಿ ತಿಳಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಪ್ರಕರಣ ದಾಖಲು ಮಾಡಿ ಆರೋಪಿ ನಾಗಪ್ಪನನ್ನು ಬಂಧಿಸಿದ್ದಾರೆ.

ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿ ನಾಗಪ್ಪನಿಗೆ 10 ವರ್ಷ ಕಠಿಣ ಸಜೆ ಮತ್ತು ಐದು ಸಾವಿರ ರೂಪಾಯಿ ದಂಡ ವಿಧಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+