• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪುತ್ತೂರಿನಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿ ಬಂಧನ

|

ಮಂಗಳೂರು, ಜುಲೈ 5: ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಆಘಾತಕಾರಿ ಘಟನೆ ಮಾಸುವ ಮುನ್ನವೇ ಇನ್ನೊಂದು ಅತ್ಯಾಚಾರ ಯತ್ನ ಪ್ರಕರಣ ನಡೆದಿದೆ. ಪುತ್ತೂರು ಹೊರವಲಯದಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿರುವುದು ವರದಿಯಾಗಿದೆ.

ಸಾಮೂಹಿಕ ಅತ್ಯಾಚಾರದ ವಿಡಿಯೋ ವೈರಲ್ ಮಾಡಿದ 8 ಜನರ ಬಂಧನ

ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಪುತ್ತೂರು ಸಮೀಪದ ಪಾಪೆಮಜಲು ಎಂಬಲ್ಲಿ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಆರೋಪಿಸಲಾಗಿದೆ.

ಸ್ಥಳೀಯ ನಿವಾಸಿ ವಿವಾಹಿತ ಅಜಿತ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಪ್ಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಜಿತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿ‌ಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯಿಂದ ಮಾಹಿತಿ‌ ಪಡೆದಿದ್ದಾರೆ.

English summary
Rape attempt on school girl case registered in Sampya police station near Puttur. Accused Ajith has been arrested by Sampya police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X