ಉಪ್ಪಿನಂಗಡಿಯಲ್ಲಿ ಅಪ್ರಾಪ್ತೆ ಅತ್ಯಾಚಾರಕ್ಕೆ ಯತ್ನ
ಮಂಗಳೂರು, ಜನವರಿ 6 : ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
ಸ್ಥಳೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿರುವ ಆಕೆಯನ್ನು ಪುಸಲಾಯಿಸಿ ಹತ್ತಿರದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಈ ಕುರಿತು ಸಂತ್ರಸ್ತೆ ಉಪ್ಪಿನಂಗಡಿ ಪೊಲೀಸ್ ಠಾಣೆ ಗೆ ದೂರು ನೀಡಿದ್ದಾಳೆ.

ಪೋಲಿಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.












Click it and Unblock the Notifications