ಧರ್ಮಸ್ಥಳದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಮಂಗಳೂರು, ಜುಲೈ 13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇಲ್ಲಿಯ ಅಶೋಕ ನಗರ ನಿವಾಸಿ ಯುವಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಈಗ ಗರ್ಭಿಣಿಯಾಗಿದ್ದಾಳೆ. ಇದರಿಂದ, ಮದುವೆಯಾಗುವಂತೆ ಯುವಕನನ್ನು ಒತ್ತಾಯಿಸಿದ್ದಾಳೆ. ಆದರೆ ಯುವಕ ಕೊಲೆ ಬೆದರಿಕೆ ಹಾಕಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಅಶ್ವತ್ಥನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದೇ ಮಾಚ್ ನಲ್ಲಿ ಅಶ್ವತ್ಥ ಆಕೆ ಮನೆಯವರೊಂದಿಗೆ ಸ್ನೇಹ ಬೆಳೆಸಿ, ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದ ಎನ್ನಲಾಗಿದೆ.











Click it and Unblock the Notifications