ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲ್ಲ ಜಿಲ್ಲೆಗಳಲ್ಲೂ ಪ್ರಾದೇಶಿಕ ವಿಜ್ಞಾನ ಕೇಂದ್ರː ಸಿಎಂ

|
Google Oneindia Kannada News

ಮಂಗಳೂರು, ಅ.2 : ಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರಾದೇಶಿಕ ವಿಜ್ಞಾನ ಕೇಂದ್ರ ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಪಿಲಿಕುಳ ನಿಸರ್ಗಧಾಮದಲ್ಲಿ ನಿರ್ಮಾಣವಾಗಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿ, ವಿಜ್ಞಾನದ ಬೆಳವಣಿಗೆ ಕ್ಷಿಪ್ರವಾಗಿ ಸಾಗುತ್ತಿದ್ದು ಕಂದಾಚಾರ, ಮೌಢ್ಯಗಳನ್ನು ತೊಡೆದು ಹಾಕಬೇಕಾಗಿದೆ. ಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆದರೆ ಮಾತ್ರವೇ ಇಂಥ ಮೌಢ್ಯಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದರು.

ಮೂಲ ವಿಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮೂಲ ವಿಜ್ಞಾನದಿಂದಾಗಿಯೇ ಇಸ್ರೋ ವಿಜ್ಞಾನಿಗಳ ಪ್ರಥಮ ಪ್ರಯತ್ನದಲ್ಲೇ ಮಂಗಳಯಾನ ಯಶಸ್ವಿಯಾಗಿದೆ. ವೈದ್ಯ, ಇಂಜಿನಿಯರಿಂಗ್ ವೃತ್ತಿಯ ಜತೆಯಲ್ಲೇ ಮೂಲ ವಿಜ್ಞಾನದ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲೇ ಆಸಕ್ತಿ ಬೆಳೆಸಿಕೊಳ್ಳಬೇಕು. ಪಾಲಕರು ಮಕ್ಕಳನ್ನು ವಿಜ್ಞಾನಿಗಳನ್ನಾಗಿಸಬೇಕು ಎಂದು ಸಲಹೆ ನೀಡಿದರು.[ಕುದ್ರೋಳಿ ದೇವಾಲಯಕ್ಕೆ ಮತ್ತಿಬ್ಬರು ವಿಧವಾ ಅರ್ಚಕರು]

ಮಾಹಿತಿ, ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ಮಾತನಾಡಿ, ಹಾವೇರಿ, ತುಮಕೂರು, ಶಿವಮೊಗ್ಗ, ಹಾಸನ, ರಾಯಚೂರು, ಧಾರವಾಡ, ಬೆಳಗಾವಿ, ಬಳ್ಳಾರಿ, ಕಾರವಾರ, ಮಡಿಕೇರಿ, ಬೀದರ್ ಸೇರಿದಂತೆ 10 ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ರಚನೆಗೆ ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಕೋರಿದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಶ್ರೀಪಾದ ನಾಯಕ್, ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣ ಕುರಿತು ರಾಜ್ಯ ಸರ್ಕಾರದಿಂದ ಸೂಕ್ತ ಪ್ರಸ್ತಾವನೆ ಬಂದಲ್ಲಿ ಮಂಜೂರಾತಿ ನೀಡುವುದಾಗಿ ಭರವಸೆ ನೀಡಿದರು.

ಸಚಿವ ಬಿ. ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಮಹಾಬಲ ಮಾರ್ಲ, ಶಾಸಕರಾದ ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಸ್ವಾಗತಿಸಿದರು. ಶಾಸಕ ಜೆ.ಆರ್.ಪ್ರಾಸ್ತಾವಿಕ ಮಾತನಾಡಿದರು. ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ವಿಜ್ಞಾನ ಕೇಂದ್ರ ಉದ್ಘಾಟನೆ

ವಿಜ್ಞಾನ ಕೇಂದ್ರ ಉದ್ಘಾಟನೆ

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಪೂರ್ಣಕುಂಭ ಸ್ವಾಗತ

ಪೂರ್ಣಕುಂಭ ಸ್ವಾಗತ

ಪಿಲಿಕುಳ ವಿಜ್ಞಾನ ಕೇಂದ್ರ ಉದ್ಘಾಟನೆಗೆ ಆಗಮಿಸಿದ್ದ ಗಣ್ಯರನ್ನು ವಾದ್ಯ ಘೋಷ ಮತ್ತು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.

ಪಿಲಿಕುಳ ವಿಜ್ಞಾನ ಕೆಂದ್ರದ ಹೊರನೋಟ

ಪಿಲಿಕುಳ ವಿಜ್ಞಾನ ಕೆಂದ್ರದ ಹೊರನೋಟ

ಉದ್ಘಾಟನೆಗೊಂಡಿರುವ ಪಿಲಿಕುಳ ವಿಜ್ಞಾನ ಕೆಂದ್ರದ ಹೊರನೋಟ.

ಮುಖ್ಯಮಂತ್ರಿ ಮಾತು

ಮುಖ್ಯಮಂತ್ರಿ ಮಾತು

ಪಿಲಿಕುಳ ವಿಜ್ಞಾನ ಕೆಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ.

ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ

ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ

ಪಿಲಿಕುಳ ವಿಜ್ಞಾನ ಕೇಂದ್ರ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

English summary
Chief Minister Siddaramaiah and Union Minister Shripad Yesso Naik inaugurated the state's second Pilikula Regional Science Center that was setup at Pilikula. 'We are thinking to establish sub- regional science centre in all districts said Siddaramaiah after inaugurating science centre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X