ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖ್ಯಾತ ಹಿರಿಯ ಯಕ್ಷಗಾನ ಭಾಗವತ ಕುಬಣೂರು ಶ್ರೀಧರ ರಾವ್ ಇನ್ನಿಲ್ಲ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 18 : ಕಟೀಲು ಮೇಳದ ಪ್ರಧಾನ ಬಾಗವತರಾಗಿದ್ದ ಕುಬಣೂರು ಶ್ರೀಧರ ರಾವ್ (66) ಸೋಮವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿದಾನರಾಗಿದ್ದಾರೆ.

ಕೆಲವು ದಿನಗಳ ಹಿಂದೆ ಶ್ರೀಧರ್ ರಾವ್ ಅವರು ಸಿಂಗಾಪುರದಲ್ಲಿರುವ ತಮ್ಮ ಮಗಳ ಮನೆಗೆ ಹೋಗಿದ್ದರು. ಅಲ್ಲಿ ಅವರು ಅನಾರೋಗ್ಯ ಪೀಡಿತರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಕರೆತಂದು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

Renowned Yakshagana artist Kubanur Shridhar Rao passed away

ಕಟೀಲು ಮೇಳದ ಪ್ರಧಾನ ಬಾಗವತರಾಗಿದ್ದ ಶ್ರೀಧರ್ ರಾವ್ ಕದ್ರಿಮೇಳ, ನಂದಾವರ, ಅರುವ, ಬಪ್ಪನಾಡು, ಕದ್ರಿ, ಕಾಂತಾವರ ಹೀಗೆ ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸಿ ಕಳೆದ 25 ವರ್ಷಗಳಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಮೇಳದಲ್ಲಿ ಇದ್ದುಕೊಂಡೇ ಕಳೆದ 25 ವರ್ಷಗಳಿಂದ ಯಕ್ಷ ಪ್ರಭಾ ಎಂಬ ಯಕ್ಷಗಾನ ಮಾಸ ಪತ್ರಿಕೆಯನ್ನು ಅವರು ನಡೆಸುತ್ತಿದ್ದರು. ಕುಬಣೂರು ಶ್ರೀಧರ್ ರಾವ್ ಓದಿದ್ದು, ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ , ಆದರೆ ಅವರು ಜೀವನ ಕಂಡುಕೊಂಡದ್ದು ಯಕ್ಷಗಾನದಲ್ಲಿ.

ಶ್ರೀಧರ ರಾಯರು ಐ.ರಘುಮಾಸ್ತರರಿಂದ ಕರ್ನಾಟಕ ಸಂಗೀತ, ಅಡ್ಕಸ್ಥಳ ರಾಮಚಂದ್ರ ಭಟ್ಟರಿಂದ ಮದ್ದಳೆವಾದನ, ಉಪ್ಪಳ ಕೃಷ್ಣ ಮಾಸ್ತರ್ ಹಾಗೂ ಬೇಕೂರು ಕೇಶವರಿಂದ ನಾಟ್ಯಾಭ್ಯಾಸ, ಟಿ.ಗೋಪಾಲಕೃಷ್ಣ ಮಯ್ಯ ಹಾಗೂ ಮಾಂಬಾಡಿ ನಾರಾಯಣ ಭಟ್ಟರಿಂದ ಯಕ್ಷಗಾನ ಭಾಗವತಿಕೆಯನ್ನು ಕಲಿತು ಬದುಕಿನಲ್ಲಿ ಏಳುಬೀಳುಗಳನ್ನು ಎದುರಿಸುತ್ತಾ ಮುನ್ನಡೆದಿದ್ದರು.

ದಾಶರಥಿ ದರ್ಶನ, ಸಾರ್ವಭೌಮ ಸಂಕರ್ಷಣ, ಮನುವಂಶವಾಹಿನಿ, ಮಹಾಸತಿ ಮಂದಾಕಿನಿ, ಕಾಂತಾವರ ಕ್ಷೇತ್ರ ಮಹಾತ್ಮೆ, ಪಟ್ಟಣ ಮಣೆ.. ಪ್ರಸಂಗಗಳ ರಚಿಸಿದ ಶ್ರೀಧರ್ ರಾವ್ ಯಕ್ಷರಂಗದ ಕೀರ್ತಿಶೇಷ ಕಲ್ಲಾಡಿ ವಿಠಲ ಶೆಟ್ಟರ ಜೀವನ ಗಾಥೆ ಯಕ್ಷವಿಜಯ ವಿಠಲ ಕೃತಿನ್ನು ರಚಿಸಿದ್ದರು.

English summary
Renowned Yakshagana artiste Kubanur Shridhar Rao Bhagawat passed away of brief illness here on September 18. Kubanur Shridhar Rao, a master of Tenku Tittu style of Yakshagana as background singer (Bhagavatike) was associated with Kateel Mela for decades.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X