ಮಂಗಳೂರು ಚಲೋ ಹಿನ್ನೆಲೆ: ನಗರದಾದ್ಯಂತ ನಿರ್ಬಂಧಕಾಜ್ಞೆ ಜಾರಿ
ಮಂಗಳೂರು, ಸೆಪ್ಟೆಂಬರ್ 6: ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಳ್ಳಲಾಗಿರುವ 'ಮಂಗಳೂರು ಚಲೋ' ಬೈಕ್ ಜಾಥಾ ಹಾಗೂ ಬೃಹತ್ ಪ್ರತಿಭಟನಾ ಸಭೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರಿನಾದ್ಯಂತ ಪೊಲೀಸ್ ಕಾಯ್ದೆ ಕಲಂ 35 ರ ಅಡಿಯಲ್ಲಿ ನಿರ್ಬಂಧಕಾಜ್ಞೆ ಜಾರಿ ಮಾಡಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು ಮುಂಜಾನೆಯಿಂದ ಸೆಪ್ಟೆಂಬರ್ 8 ರ ಮಧ್ಯರಾತ್ರಿವರೆಗೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35(3)ರಡಿಯಲ್ಲಿ ನಿರ್ಬಂಧಕಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಆದೇಶ ಹೊರಡಿಸಿದ್ದಾರೆ .

ಈ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಸಂಘಟನೆಗಳು ಸದಸ್ಯರು, ವ್ಯಕ್ತಿಗಳು ಯಾವುದೇ ರೀತಿಯಲ್ಲಿ ಬೈಕ್ ಮತ್ತು ಇತರ ವಾಹನಗಳ ಮೂಲಕ ಜಾಥಾ ,ಪಾದಯಾತ್ರೆ, ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ .
ಮಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಸೇರಿದಂತೆ ಎಲ್ಲ ಸಮುದಾಯಗಳ ರಕ್ಷಣೆ ಹಿನ್ನೆಲೆಯಲ್ಲಿ ಈ ನಿರ್ಬಂಧಕಾಜ್ಞೆ ಹೊರಡಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಜಿಲ್ಲಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಹೊರಗಡೆಯಿಂದ ಆಗಮಿಸುವ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.












Click it and Unblock the Notifications