ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಹ ಪೀಡಿತ ಕರಾವಳಿಗೆ ಕಂದಾಯ ಸಚಿವ ದೇಶಪಾಂಡೆ ಭೇಟಿ

By Nayana
|
Google Oneindia Kannada News

ಬೆಂಗಳೂರು, ಜೂನ್ 13: ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ಜೂನ್ 14ರಂದು ಭೇಟಿ ನೀಡಲಿದ್ದಾರೆ.

ಗುರುವಾರ ಬೆಳಗ್ಗೆ 7.30ಕ್ಕೆ ಸಚಿವರು ಮಂಗಳೂರಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ. ನಂತರ 8.30ಕ್ಕೆ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ತೆರಳಲಿದ್ದು ಸರ್ಕಾರದ ವತಿಯಿಂದ ಕೈಗೊಂಡಿರುವ ಪರಿಹಾರ ಕ್ರಮಗಳನ್ನು ವೀಕ್ಷಿಸಲಿದ್ದಾರೆ.

ಚಾರ್ಮಾಡಿ ಘಾಟ್ ವಾಹನ ಸಂಚಾರಕ್ಕೆ ಮುಕ್ಚಾರ್ಮಾಡಿ ಘಾಟ್ ವಾಹನ ಸಂಚಾರಕ್ಕೆ ಮುಕ್

ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಳೆ-ಬೆಳೆ ಪರಿಸ್ಥಿತಿ, ಮಳೆಹಾನಿ ಮತ್ತು ಕೈಗೊಂಡ ಪರಿಹಾರ ಕ್ರಮಗಳನ್ನು ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಉಡುಪಿ ತಲುಪುವ ಸಚಿವ ಆರ್ ವಿ ದೇಶಪಾಂಡೆಯವರು ಅಲ್ಲಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಲಿದ್ದು, 3.30ಕ್ಕೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ವೀಕ್ಷಣೆ ಕೈಗೊಳ್ಳುವರು.

Revenue minister Deshpande will visit flood affected area

ನಂತರ, 4.40ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಮಳೆ-ಬೆಳೆ ಪರಿಸ್ಥಿತಿ, ಮಳೆಹಾನಿ ಮತ್ತು ಕೈಗೊಂಡ ಪರಿಹಾರ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮುಂಗಾರು ಆರಂಭವಾದ ಎರಡರಿಂದ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಅನಾಹುತಗಳು ಸಂಭವಿಸಿತ್ತು, ಸಾಕಷ್ಟು ಮಂದಿ ಆಶ್ರಯವನ್ನು ಕಳೆದುಕೊಂಡಿದ್ದರು. ಈ ವಿಚಾರವಾಗಿ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲಿದ್ದಾರೆ.

English summary
Revenue minister Deshpande will visit to flood affected areas of Dakshina Kannada and Udupi districts on June 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X