ಮಂಗಳೂರಿನಲ್ಲಿ ತರಬೇತು ಗೊಳ್ಳುತಿದ್ದಾರೆ ಶೂಟಿಂಗ್ ಕಲಿಗಳು
ಮಂಗಳೂರು, ಫೆಬ್ರವರಿ 27: ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುವ ಬಯಕೆಗೆ ಮಂಗಳೂರಿನಲ್ಲಿ ವೇದಿಕೆ ಕಲ್ಪಿಸಲಾಗಿದೆ. ಕರಾವಳಿ ಭಾಗದ ಮೊಟ್ಟಮೊದಲ ಶೂಟಿಂಗ್ ಸ್ಪೋರ್ಟ್ಸ್ ರೈಫಲ್ ಕ್ಲಬ್ ಮಂಗಳೂರಿನಲ್ಲಿ ಸದ್ದಿಲ್ಲದೇ ಕಾರ್ಯಚರಿಸುತ್ತಿದೆ. ಇಲ್ಲಿ 10 ಮೀಟರ್ ಏರ್ ರೈಫಲ್ , ಹಾಗು ಏರ್ ಪಿಸ್ಟಲ್ ಟ್ರೈನಿಂಗ್ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿಯೇ ಕೇಂದ್ರಿಕೃತವಾಗಿರುವ 3 ರೈಫಲ್ ತರಬೇತಿ ಕೇಂದ್ರಗಳನ್ನು ಹೊರತುಪಡಿಸಿದರೆ ಮಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಮಂಗಳೂರು ರೈಫಲ್ ಕ್ಲಬ್ ರಾಜ್ಯದ ನಾಲ್ಕನೇ ತರಬೇತಿ ಕೇಂದ್ರವಾಗಿದೆ.
ಒಲಂಪಿಕ್ಸ್ ನಲ್ಲಿ 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ನಲ್ಲಿ ಮಿಂಚಿದ ದೇಶದ ಚಿನ್ನದ ಹುಡುಗ ಅಭಿನವ್ ಬಿಂದ್ರಾ ಹಾಗೆಯೇ ದೇಶದ ಅಭಿಮಾನದ ಚಿಲುಮೆ ಅಂಜಲಿ ಭಾಗ್ವತ್, ಜಸ್ಪಾಲ್ ರಾಣಾ, ರಾಜವರ್ಧನ್ ಸಿಂಗ್ ರಾಠೋಡ್ ರಂತೆ ರೈಫಲ್ ಶೂಟರ್ ಗಳಾಗಬೇಕೆಂಬ ಬಯಕೆ ಹಲವರಲ್ಲಿರುತ್ತದೆ. ಆದರೆ ಕನಸುಗಳಿಗೆ ರೆಕ್ಕೆ ಕಟ್ಟುವ ಅವಕಾಶವಿರುವುದಿಲ್ಲ. ಅವಕಾಶಗಳಿದ್ದರೂ ಮುಂಬಯಿ, ದೆಹಲಿ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಮಾತ್ರ. ಆದರೆ ಈ ನಡುವೆ ಕರಾವಳಿಗರಿಗೆ ರೈಫಲ್ ಶೂಟಿಂಗ್ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಅವಕಾಶ ತೆರೆದುಕೊಂಡಿದೆ. ಮಂಗಳೂರು ರೈಫಲ್ ಕ್ಲಬ್ 2016 ರಲ್ಲಿ ಆರಂಭವಾಗಿದ್ದು . ಶೂಟಿಂಗ್ ಸ್ಪೋರ್ಟ್ಸ್ ನಲ್ಲಿ ಆಸಕ್ತರಿಗೆ ತರಬೇತಿ ಆರಂಭಿಸಿದೆ. ಈ ಸಂಸ್ಥೆಯಲ್ಲಿ ಈಗಾಗಲೇ 10 ಮೀಟರ್ ಏರ್ ರೈಫಲ್ ಹಾಗೂ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ತರಬೇತಿ ನೀಡುತ್ತಿದೆ.
ಸಂಪೂರ್ಣ ಆಧುನಿಕ ಶೈಲಿಯಲ್ಲಿ ತರಬೇತಿ ಉಪಕರಣಗಳನ್ನು ಒಳಗೊಂಡಿರುವ ಈ ತರಬೇತಿ ಕೇಂದ್ರಗಳಲ್ಲಿ ಶೂಟಿಂಗ್ ಸ್ಪರ್ಧೆಗಾಗಿ ಶಾಲಾ ವಿಧ್ಯಾರ್ಥಿಗಳು ಸೇರಿದಂತೆ ವಿವಾಹಿತ ಮಹಿಳೆಯರು ತರಭೇತಿ ಆರಂಭಿಸಿ ಶೂಟಿಂಗ್ ಸ್ಪೋರ್ಟ್ಸ್ ನಲ್ಲಿ ಆಸಕ್ತಿ ತೋರುತಿದ್ದಾರೆ.

ಈ ಗಾಗಲೇ ಮಂಗಳೂರಿನ ಹಲವಾರು ಶಾಲಾ ವಿದ್ಯಾರ್ಥಿಗಳು ಏರ್ ರೈಫಲ್ ಶೂಡಿಂಗ್ ತರಬೇತಿ ಪಡೆಯುತ್ತಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಸ್ಟೀಜ್ ಇಂಟರ್ ನ್ಯಾಷನಲ್ ಶಾಲೆಯಲ್ಲೂ ತರಬೇತಿ ಆರಂಭಿಸುವ ಉದ್ದೇಶ ಈ ರೈಫಲ್ ಕ್ಲಬ್ ಹೊಂದಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಆಯೋಜನೆಗೊಂಡಿದ್ದ ರಾಷ್ಟ್ರಮಟ್ಟದ ಮುಕ್ತ ಶೂಟಿಂಗ್ ಚಾಂಪಿಯನ್‌ಷಿಪ್ ನಲ್ಲಿ ಜೂನಿಯರ್ ಗರ್ಲ್ಸ್ ವಿಭಾಗದಲ್ಲಿ ಮಂಗಳೂರಿನ ಟೀಮ್ ಬೆಳ್ಳಿ ಪದಕ ಪಡೆದುಕೊಂಡಿದೆ.

ದೇಶೀಯ ನಿರ್ಮಿತ 10 ಮೀಟರ್ ಏರ್ ರೈಫಲ್. 177 ಹಾಗೂ 10 ಮೀಟರ್ ಏರ್ ಪಿಸ್ತೂಲ್ ತರಬೇತಿ ಆರಂಭಗೊಂಡಿದ್ದು ಮುಂಬರುವ ಕೆಲವೇ ದಿನಗಳಲ್ಲಿ ರಷ್ಯನ್ ನಿರ್ಮಿತ ರೈಫಲ್ ಗಳಲ್ಲಿ ತರಬೇತಿ ಆರಂಭಗೊಳ್ಳಲಿದೆ. ಇದಲ್ಲದೇ ಡಬಲ್ ಬ್ಯಾರೆಲ್ ರೈಫಲ್ ಫೈರ್, 10 ಮೀಟರ್ ರಾಪಿಡ್ ಫೈರ್ ತರಬೇತಿ ಆರಂಭಿಸುವ ಚಿಂತನೆ ನಡೆದಿದೆ. ಮುಂಬರುವ ದಿನಗಳಲ್ಲಿ ಕಡಲ ತಡಿಯ ನಗರಗಳಿಂದಲೂ ಶೂಟಿಂಗ್ ಪ್ರತಿಭೆಗಳು ದೇಶದ ಗಮನ ಸೆಳೆಯಲಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications