ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ್ಮಠ ಸೇತುವೆ ಮುಳುಗಡೆ, ಸುಬ್ರಹ್ಮಣ್ಯದಲ್ಲಿ ತೀರ್ಥ ಸ್ನಾನವೂ ಸವಾಲು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 12 : ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರಿಗೆ ಸ್ನಾನಘಟ್ಟದಲ್ಲಿ ತೀರ್ಥ ಸ್ನಾನ ಮಾಡಲು ಸಾಧ್ಯವಾಗದ ಪರಿಸ್ಥಿತಿ ಸೃಷ್ಟಿಯಾಗಿದೆ.

Road block between Subrahmanya and Uppinangadi

ಸ್ನಾನಘಟ್ಟದ ಮೇಲೆ ಹರಿಯುತ್ತಿರುವ ನೀರಿನಲ್ಲೇ ಭಕ್ತಾದಿಗಳು ತೀರ್ಥಸ್ನಾನವನ್ನು ಮಾಡುತ್ತಿದ್ದಾರೆ. ಉಪ್ಪಿನಂಗಡಿ- ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಹೊಸ್ಮಠ ಸೇತುವೆಯೂ ನೀರಿನಿಂದ ಮುಳುಗಡೆಯಾಗಿದ್ದು, ಈ ರಸ್ತೆಯ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಿದೆ. ನೀರಿನ ಮಟ್ಟ ಇಳಿಯುವವರೆಗೆ ಸುಗಮ ಸಂಚಾರಕ್ಕೆ ಪ್ರಯಾಣಿಕರು ಕಾಯಲೇಬೇಕಾದ ಪರಿಸ್ಥಿತಿ ಇದೆ.

Road block between Subrahmanya and Uppinangadi

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾದಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದಲ್ಲಿ ವಾಸಿಸುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

English summary
Due to heavy rain in the western ghat range and region around Subrahmanya area over past few days has caused the river Kumaradhara to go in full spate. flood situation in Shri Kshethra Subrahmanya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X