ಮಂಗಳೂರಿನಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರ ಗುಂಡಿನ ದಾಳಿ

ಮಂಗಳೂರು, ಜುಲೈ 9: ಮಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಗೋ ರಕ್ಷಣೆ ನೆಪದಲ್ಲಿ, ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ರೌಡಿ ಶೀಟರ್ ಭವಿತ್ ರಾಜ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಜುಲೈ 7ರ ತಡರಾತ್ರಿ ಮಂಗಳೂರು ಹೊರವಲಯದ ಕುಲಶೇಖರ ಸಿಲ್ವರ್‌ಗೇಟ್ ಬಳಿ ಲಾರಿ ಚಾಲಕ ಉಳಾಯಿಬೆಟ್ಟು ನಿವಾಸಿ ಉಮರ್ ಫಾರೂಕ್ (32) ಮೇಲೆ ಹಲ್ಲೆ ನಡೆಸಲಾಗಿತ್ತು. ಟೆಂಪೋ ಗೂಡ್ಸ್ ವಾಹನದಲ್ಲಿ ಮಾವಿನಹಣ್ಣನ್ನು ಲೋಡ್ ಮಾಡಿಕೊಂಡು ಮಂಗಳೂರಿನ ಮಾರುಕಟ್ಟೆಗೆ ಕೊಂಡೊಯ್ಯಲಾಗುತ್ತಿದ್ದ ಸಂದರ್ಭ ಕುಲಶೇಖರ ಸಿಲ್ವರ್‌ಗೇಟ್ ಸಮೀಪಿಸುತ್ತಿದ್ದಂತೆ ಬೈಕ್ ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಲಾರಿ ಚಾಲಕ ಉಮರ್ ಫಾರೂಕ್ ಗಂಭೀರವಾಗಿ ಗಾಯಗೊಂಡಿದ್ದರು. ಲಾರಿಯಲ್ಲಿ ಗೋಸಾಗಾಟದ ಸಂಶಯದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಕುರಿತು ಕಂಕನಾಡಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.

rowdy sheeter shoot out in Mangaluru

ತನಿಖೆ ನಡೆಸಿದ ಪೊಲೀಸರು, ಈ ಪ್ರಕರಣದಲ್ಲಿ ಭವಿತ್ ರಾಜ್ ನೇರವಾಗಿ ಭಾಗಿಯಾಗಿದ್ದ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪೊಲೀಸರ ತಂಡ ಮಂಗಳೂರು ಹೊರವಲಯದ ಅಡ್ಯಾರ್ ಎಂಬಲ್ಲಿಗೆ ಭವಿತ್ ರಾಜ್ ಬಂಧಿಸಲು ತೆರಳಿತ್ತು. ಈ ಸಂದರ್ಭ ಭವಿತ್ ರಾಜ್ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ.

ಬಂಧಿಸಲು ಬಂದ ಪೊಲೀಸರ ಮೇಲೆ ಭವಿತ್ ದಾಳಿ ನಡೆಸಿದ ಪರಿಣಾಮ ಆತ್ಮರಕ್ಷಣೆಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಭವಿತ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದು, ಪೊಲೀಸರು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+