ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಸರಕಾರದಿಂದ ದೀಪಕ್ ರಾವ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

By Sachhidananda Acharya
|
Google Oneindia Kannada News

ಬೆಂಗಳೂರು, ಜನವರಿ 4: ಬುಧವಾರ ಮಂಗಳೂರಿನ ಕಾಟಿಪಳ್ಳದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ದೀಪಕ್ ರಾವ್ ಯಾರು? ಕೊಲೆ ಆಗಲು ಕಾರಣವೇನು?ದೀಪಕ್ ರಾವ್ ಯಾರು? ಕೊಲೆ ಆಗಲು ಕಾರಣವೇನು?

ಇನ್ನು ಇಂದು ಬೆಳಿಗ್ಗೆ ಕಾಟಿಪಳ್ಳಕ್ಕೆ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಶಶಿಕಾಂತ್ ಸೆಂಥಿಲ್, ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚಿಸಿದೆ. ತಕ್ಷಣ ಪರಿಹಾರ ಧನವನ್ನು ನೀಡುವುದಾಗಿ ಹೇಳಿದ್ದರು.

Rs 10 lakh compensation for Deepak Rao family from state government

ಅಷ್ಟೇ ಅಲ್ಲದೆ ಸರ್ಕಾರದಿಂದ ಮತ್ತಷ್ಟು ಪರಿಹಾರ ಧನಕ್ಕಾಗಿ ಬೇಡಿಕೆ ಇಟ್ಟಿದ್ದೇನೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಇನ್ನೂ ಐದು ಲಕ್ಷ ರೂಪಾಯಿ ಬರಲಿದೆ ಎಂದು ಹೇಳಿದ್ದರು. ಆದರೆ ಜಿಲ್ಲಾಧಿಕಾರಿ ಮಾತಿಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದರು. 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು.

ಇದಲ್ಲದೆ ಬುಧವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದರೆ, ಸಿಟಿ ರವಿ 25 ಲಕ್ಷ ರೂಪಾಯಿ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದರು.

ಇದೀಗ ಸರಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಜತೆಗೆ ಮಂಗಳೂರು ಉತ್ತರ ಶಾಸಕ ಮೊಯ್ದೀನ್ ಬಾವಾ ದೀಪಕ್ ರಾವ್ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

English summary
Karnataka government announces compensation Rs 10 lakh to family of youth Deepak Rao from Katipalla who was attacked by four unidentified persons resulting in his death at a hospital yesterday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X