ಮಂಗಳೂರು ವಿಮಾನ ನಿಲ್ದಾಣದಲ್ಲಿ 34 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ವಶ
ಮಂಗಳೂರು, ಜುಲೈ 15: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.
ದುಬೈನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕೇರಳದ ಕೊಯಿಕ್ಕೋಡ್‌ನ ಮೊಹಮ್ಮದ್ ಮೂಸ ಮಿಯಾಸ್ (18), ಕೇರಳದ ಉಪ್ಪಳದ ಮೊಹಮ್ಮದ್ ಅನ್ಸಾರ್ ಕಯ್ಯಾರ್ (34) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಸೂಟ್‌ಕೇಸ್ ಕೆಳಭಾಗದಲ್ಲಿ ಅಡಗಿಸಿ ಚಿನ್ನ ಸಾಗಿಸುತ್ತಿದ್ದು, ಚಿನ್ನವನ್ನು ಪೌಡರ್ ರೂಪದಲ್ಲಿ ಸಾಗಾಟ ಮಾಡುತ್ತಿದ್ದರು. ಇಬ್ಬರಿಂದ ಒಟ್ಟು 703 ಗ್ರಾಂ ಚಿನ್ನ ವಶ ಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಚಿನ್ನದ ಮೌಲ್ಯ 34,46,464 ರೂಪಾಯಿ ಅಂತಾ ಅಂದಾಜಿಸಲಾಗಿದೆ. ಚಿನ್ನ ಮತ್ತು ಇಬ್ಬರು ಪ್ರಯಾಣಿಕರನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications