ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ವಿಮಾನ ನಿಲ್ದಾಣದಲ್ಲಿ 34 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ವಶ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 15: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.

ದುಬೈನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

Mangaluru: Rs 34 Lakhs Worth Illegal Gold Siezed In International Airport

ಕೇರಳದ ಕೊಯಿಕ್ಕೋಡ್‌ನ ಮೊಹಮ್ಮದ್ ಮೂಸ ಮಿಯಾಸ್ (18), ಕೇರಳದ ಉಪ್ಪಳದ ಮೊಹಮ್ಮದ್ ಅನ್ಸಾರ್ ಕಯ್ಯಾರ್ (34) ಬಂಧಿತ ಆರೋಪಿಗಳಾಗಿದ್ದಾರೆ.

Mangaluru: Rs 34 Lakhs Worth Illegal Gold Siezed In International Airport

ಆರೋಪಿಗಳು ಸೂಟ್‌ಕೇಸ್ ಕೆಳಭಾಗದಲ್ಲಿ ಅಡಗಿಸಿ ಚಿನ್ನ ಸಾಗಿಸುತ್ತಿದ್ದು, ಚಿನ್ನವನ್ನು ಪೌಡರ್ ರೂಪದಲ್ಲಿ ಸಾಗಾಟ ಮಾಡುತ್ತಿದ್ದರು. ಇಬ್ಬರಿಂದ ಒಟ್ಟು 703 ಗ್ರಾಂ ಚಿನ್ನ ವಶ ಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಚಿನ್ನದ ಮೌಲ್ಯ 34,46,464 ರೂಪಾಯಿ ಅಂತಾ ಅಂದಾಜಿಸಲಾಗಿದೆ. ಚಿನ್ನ ಮತ್ತು ಇಬ್ಬರು ಪ್ರಯಾಣಿಕರನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Rs 34 Lakhs Worth Illegal gold Siezed at Mangaluru International Airport, 2 accused Arrested by Customs officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X