ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ ಮಂಜೂರು

|
Google Oneindia Kannada News

ಮಂಗಳೂರು, ಅಕ್ಟೋಬರ್ 3: ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿ ಸಹಭಾಗಿತ್ವದಲ್ಲಿ 65 ಕೋಟಿ ಮಂಜೂರು ಮಾಡಿವೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.

ಸೋಮವಾರ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ 25 ಕೋಟಿ ನೀಡಿದ್ದು ಉಳಿಕೆ ಹಣವನ್ನು ರಾಜ್ಯ ಸರ್ಕಾರ ಪಾವತಿಸಲಿದೆ ಎಂದು ಮಾಹಿತಿ ನೀಡಿದರು.

Rs 65 Crore Sanctioned For Development of Old Port in Mangaluru– MLA JR Lobo

ಲಕ್ಷದ್ವೀಪಕ್ಕೆ ಉನ್ನತ ಮಟ್ಟದ ನಿಯೋಗವನ್ನು ಕೊಂಡೊಯ್ದು ಅಲ್ಲಿನ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ನುಡಿದ ಅವರು, ಲಕ್ಷದ್ವೀಪದ ವ್ಯವಹಾರ ಸಂಪೂರ್ಣವಾಗಿ ಇಲ್ಲಿಗೆ ಬರುವಂತೆ ಮಾಡಲು ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನೂ ಮಾಡುವುದಾಗಿ ತಿಳಿಸಿದರು.

ಇನ್ನು ಹಳೆ ಬಂದರು ಹೂಳೆತ್ತುವ ಕಾಮಗಾರಿಗೆ 29 ಕೋಟಿ ಮಂಜೂರಾಗಿದ್ದು ಈ ಪೈಕಿ ಕೇಂದ್ರ ಸರ್ಕಾರ 15 ಕೋಟಿ ನೀಡಲಿದ್ದು ಉಳಿಕೆ ಮೊತ್ತವನ್ನು ರಾಜ್ಯ ಸರ್ಕಾರ ಪಾವತಿಸಲಿದೆ. ಈಗ ಬಂದರಿನ ಆಳ ಕೇವಲ 4 ಮೀಟರ್ ಮಾತ್ರ ಇದ್ದು ಇದನ್ನು 7 ಮೀಟರ್ ಗೆ ಹೆಚ್ಚಿಸಬೇಕಾಗಿದೆ. ಹೀಗೆ ಮಾಡುವುದರಿಂದ ಬೃಹತ್ ಹಡಗುಗಳು ಹಳೆ ಬಂದರಿಗೆ ಬರಲು ಸಾಧ್ಯವಾಗುತ್ತದೆ ಎಂದು ಜೆ.ಆರ್ ಲೋಬೋ ವಿವರಿಸಿದರು.

ಇದೇ ವೇಳೆ ಮೀನುಗಾರಿಕೆ ಬಂದರು ಅಭಿವೃದ್ಧಿಯ 3ನೇ ಹಂತದ ಕಾಮಗಾರಿಗೆ 57.60 ಕೋಟಿ ಮಂಜೂರು ಮಾಡಿದ್ದು ಈ ಪೈಕಿ ಕೇಂದ್ರ ಸರ್ಕಾರ 37.60 ಕೋಟಿ ರೂಪಾಯಿಯನ್ನು ಒದಗಿಸಲಿದೆ. ಉಳಿಕೆ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಬೇಕಾಗಿದೆ. ಈ ಮೊದಲು ಕೇಂದ್ರ ಸರ್ಕಾರ 60% ಮತ್ತು ರಾಜ್ಯ ಸರ್ಕಾರ 40% ಹಣ ನೀಡುತ್ತಿತ್ತು. ಈ ಮೊತ್ತವನ್ನೇ ಮುಂದುವರಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ನಾಡದೋಣಿಗಳಿಗೆ ಸರಿಯಾದ ತಂಗುದಾಣ ಇಲ್ಲದಿರುವುದನ್ನು ಮನಗಂಡು ರಾಜ್ಯ ಸರ್ಕಾರ 2.82 ಕೋಟಿ ಮಂಜೂರು ಮಾಡಿದೆ. ಅಲ್ಲದೆ ಸುಲ್ತಾನ್ ಬತ್ತೇರಿ ಅಭಿವೃದ್ಧಿಗೆ 4.5 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಲೋಬೋ ಹೇಳಿದರು.

ಮಂಗಳೂರು ಹಳೇ ಬಂದರಿನಲ್ಲಿ ಮೀನುಗಾರ ಮಹಿಳೆಯರಿಗೆ ಶೆಡ್ ನಿರ್ಮಿಸಲು ರಾಜ್ಯ ಸರ್ಕಾರ 47 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದ್ದು ಆದಷ್ಟು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಭರವಸೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಬೆಂಗ್ರೆ ಮಹಾಜನ ಸಭಾದ ಅಧ್ಯಕ್ಷ ಮೋಹನ್ ಬೆಂಗ್ರೆ, ಮಾಜಿ ಅಧ್ಯಕ್ಷ ಚೇತನ್ ಬೆಂಗ್ರೆ, ಅಸ್ಲಾಂ ಮತ್ತು ಶೇಖರ ಸುವರ್ಣ ಉಪಸ್ಥಿತರಿದ್ದರು.

English summary
"The Central and State government have released Rs 65 crores for the third phase of the development work at the Mangaluru old port. The Central government has sanctioned Rs 25 crore and the remaining funds will be sanctioned by the state government”, said MLA J R Lobo in a press meet held at the Press Club here in Mangaluru on October 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X