ಮಂಗಳೂರು: ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಸಾವು
ಮಂಗಳೂರು, ಜುಲೈ 7: ಜುಲೈ 4ರಂದು ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಮೇಲೆ ತಂಡವೊಂದು ದಾಳಿ ನಡೆಸಿ ಚೂರಿಯಿಂದ ಇರಿದು ಮಂಗಳವಾರ ರಾತ್ರಿ ಪರಾರಿಯಾಗಿತ್ತು. ಬಿ.ಸಿ ರೋಡಿನಲ್ಲಿ ಈ ಘಟನೆ ನಡೆದಿತ್ತು.
ಶರತ್ ಮಡಿವಾಳ ಸಜಿಪಮುನ್ನೂರು ಗ್ರಾಮದ ಕಂದೂರು ನಿವಾಸಿ ತನಿಯಪ್ಪ ಎಂಬವರ ಮಗನಾಗಿದ್ದು 28 ವರ್ಷ ವಯಸ್ಸಾಗಿತ್ತು. ಬಿ.ಸಿ.ರೋಡಿನಲ್ಲಿ ಉದಯಲಾಂಡ್ರಿಯನ್ನು ನಡೆಸುತ್ತಿದ್ದ ಅವರ ಮೇಲೆ ಮಂಗಳವಾರ ರಾತ್ರಿ ಕೆಲಸ ಮುಗಿಸಿ, ಅಂಗಡಿಯಿಂದ ಹೊರಬರುತ್ತಿದ್ದ ವೇಳೆ ದಾಳಿ ನಡೆದಿತ್ತು.

ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಶರತ್ ಗೆ ನಗರದ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನು ಇಂದು ಬೆಳಿಗ್ಗೆಯಷ್ಟೇ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ಶರತ್ ಹಲ್ಲೆಗೈದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಬಿ.ಸಿ. ರೋಡಿನಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಸಂಜೆ ಸ್ವತಃ ಶರತ್ ಸಾವನ್ನಪ್ಪಿದ್ದಾರೆ.












Click it and Unblock the Notifications