ಮಂಗಳೂರು ದಸರಾಕ್ಕೆ ಚಾಲನೆ ನೀಡಲಿದ್ದಾರೆ ಎಸ್.ಮುರುಗನ್
ಮಂಗಳೂರು, ಅಕ್ಟೋಬರ್ 12 : ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾಕ್ಕೆ ಅ.13ರ ಮಂಗಳವಾರದಂದು ಮಂಗಳೂರು ಪೊಲೀಸ್ ಆಯುಕ್ತ ಎಸ್.ಮುರುಗನ್ ಅವರು ಚಾಲನೆ ನೀಡಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್.ಸಾಯಿರಾಮ್ ಅವರು, 'ಮಂಗಳವಾರ ಬೆಳಗ್ಗೆ 11 ಗಂಟೆಗೆ ಗೋಕರ್ಣನಾಥ ಕಲಾಮಂಟಪದಲ್ಲಿ ನವದುರ್ಗೆಯರು ಹಾಗೂ ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ' ಎಂದು ಹೇಳಿದರು. [ಮೈಸೂರು ದಸರಾ ಉದ್ಘಾಟಿಸುವ ರೈತ ಪುಟ್ಟಯ್ಯ ಪರಿಚಯ]

'ರಾಜ್ಯದಲ್ಲಿ ಮಳೆಯ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಜನರ ಸುಭಿಕ್ಷೆಗಾಗಿ ಕ್ಷೇತ್ರದಲ್ಲಿ ಅ.16ರಂದು ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಅ.14ರಂದು ಸಂಜೆ 4 ಗಂಟೆಗೆ ನೆಹರೂ ಮೈದಾನದಿಂದ ಗೋಕರ್ಣ ಕ್ಷೇತ್ರದವರೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ' ಎಂದು ಮಾಹಿತಿ ನೀಡಿದರು. [ಮಂಗಳೂರು:ವಿಜೃಂಭಣೆಯ ಶಾರದಾ ಮಹೋತ್ಸವ]
ಪಟಾಕಿ ನಿಷೇಧ : ದಸರಾ ಮೆರವಣಿಗೆಯ ಸಂದರ್ಭ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಬೇಕು. ಪಟಾಕಿ ಹೊಡೆದು ಅಡಚಣೆ ಉಂಟಾದರೆ, ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ಹರಿಕೃಷ್ಣ ಬಂಟ್ವಾಳ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ಕ್ಷೇತ್ರದ ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕೋಶಾಧಿಕಾರಿ ಪದ್ಮರಾಜ್ ಆರ್, ಕ್ಷೇತ್ರ ಅಭಿವೃದ್ಧಿ ಮಂಡಳಿಯ ಸದಸ್ಯರಾದ ದೇವೇಂದ್ರ ಪೂಜಾರಿ, ಡಾ.ಬಿ.ಜಿ. ಸುವರ್ಣ, ಎಸ್. ಹರಿಶ್ಚಂದ್ರ, ಡಿ.ಡಿ.ಕಟ್ಟೆಮಾರ್, ಲೀಲಾಕ್ಷ ಕರ್ಕೇರಾ, ಶೇಖರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications