ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧರ್ಮಸ್ಥಳದಲ್ಲಿ ಮೇ 1 ರಂದು 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ

|
Google Oneindia Kannada News

ಮಂಗಳೂರು, ಜನವರಿ 25: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ಬರುವ ಮೇ 1 ರಂದು ಸಂಜೆ 6.48 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 48 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಸಾಮೂಹಿಕ ವಿವಾಹ ಆಗಲಿಚ್ಚಿಸುವವರು ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಮದುವೆ ಸಂದರ್ಭದಲ್ಲಿ ವರನಿಗೆ ಧೋತಿ ,ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಲ ಸೂತ್ರ ನೀಡಲಾಗುತ್ತದೆ. ಯಾವುದೇ ಸಂದರ್ಭದಲ್ಲೂ ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುತ್ತದೆ.

Samuhika vivaha in Dharmasthala

ಪೇದೆ ರಜೆಗಾಗಿ ಬರೆದ ಪತ್ರ ವೈರಲ್: ಹೊಸ ಮದ್ವೆ ಗಂಡಿಗೆ ರಜೆ ಕೊಡಿ ಎಂದ ನೆಟ್ಟಿಗರುಪೇದೆ ರಜೆಗಾಗಿ ಬರೆದ ಪತ್ರ ವೈರಲ್: ಹೊಸ ಮದ್ವೆ ಗಂಡಿಗೆ ರಜೆ ಕೊಡಿ ಎಂದ ನೆಟ್ಟಿಗರು

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದು ವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಆರಂಭಿಸಿದ್ದರು. ಅಂದಿನಿಂದಲೂ ಇದು ಪ್ರತಿವರ್ಷ ಶ್ರೀ ಕ್ಷೇತ್ರದಲ್ಲಿ ನಡೆಸಲಾಗುತ್ತದೆ. ಈವರೆಗೆ ಶ್ರೀ ಕ್ಷೇತ್ರದಲ್ಲಿ 12,160 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿವೆ.

English summary
Shree kshethra Dharmasthala hold Samuhika Vivaha on May 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X