ಡ್ರಗ್ಸ್ ಪ್ರಕರಣ: ಸಿಸಿಬಿ ಚಾರ್ಜ್‌ಶೀಟ್‌ನಲ್ಲಿ ಅನುಶ್ರೀ ಹೆಸರು ಉಲ್ಲೇಖ
ಬೆಂಗಳೂರು, ಸೆಪ್ಟೆಂಬರ್ 08: ಕನ್ನಡ ಕಿರುತೆರೆಯ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ವಿರುದ್ಧ ಸ್ಯಾಂಡಲ್‍ವುಡ್ ಡ್ರಗ್ ಲಿಂಕ್ ಪ್ರಕರಣ ಮತ್ತೆ ಅಂಟಿಕೊಂಡಿದೆ. ಇದೀಗ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಅನುಶ್ರೀ ಹೆಸರನ್ನು ಉಲ್ಲೇಖ ಮಾಡಲಾಗಿದೆ.
Recommended Video
ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಅನುಶ್ರೀ ಮಾದಕ ದ್ರವ್ಯ ಮಾರಾಟ ಮತ್ತು ರೂಂಗೆ ತರುತ್ತಿದ್ದರು ಎಂದು ಅವರ ಸ್ನೇಹಿತ ಕಿಶೋರ್ ಅಮನ್ ಶೆಟ್ಟಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.
ಅನುಶ್ರೀ ಮಾದಕ ದ್ರವ್ಯ ಸಾಗಾಟದೊಂದಿಗೆ ಸ್ನೇಹಿತರೊಂದಿಗೆ ಡ್ರಗ್ ಪಾರ್ಟಿ ಹೋಗುತ್ತಿದ್ದರು ಮತ್ತು ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದೆವು. ಆಗ ಅನುಶ್ರೀ ನಮ್ಮ ರೂಂಗೆ ಎಕ್ಟಸಿ ಡ್ರಗ್ಸ್ ತರುತ್ತಿದ್ದರು ಎಂದು ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ. ಈ ಮೂಲಕ ಅನುಶ್ರೀಗೆ ಮತ್ತೆ ಡ್ರಗ್ ಶಾಕ್ ಎದುರಾಗಿದೆ.
ನಟಿ, ಸ್ಟಾರ್ ಆಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಆ್ಯಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜತೆಗೆ ಅದರ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ ಎ2 ಆರೋಪಿಯಾಗಿರುವ ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯನ್ನು ಅದರಲ್ಲಿ ಉಲ್ಲೇಖಿಸಲಾಗಿದೆ.
ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆಯಂತೆ, ಅವರ ರೂಮ್ಗೆ ಅನುಶ್ರೀ ಡ್ರಗ್ಸ್ ತರುತ್ತಿದ್ದರು. ಕಿಶೋರ್, ತರುಣ್ ಜೊತೆ ಸಾಕಷ್ಟು ಬಾರಿ ಅನುಶ್ರೀ ಕೂಡ ಡ್ರಗ್ಸ್ ಸೇವನೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ದಾಖಲಿಸಲಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ಶೀಟ್ನಲ್ಲಿ ಎ2 ಕಿಶೋರ್ ಶೆಟ್ಟಿ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. "ರಿಯಾಲಿಟಿ ಶೋನ ಕೊರಿಯೋಗ್ರಾಫರ್ ಆಗಿದ್ದ ತರುಣ್ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್ ರೂಮ್ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು.''
"ಡ್ಯಾನ್ಸ್ ಪ್ರಾಕ್ಟೀಸ್ಗೆ ಬರುವಾಗ ಅನುಶ್ರೀ ಎಕ್ಸ್‌ಟಸಿ ಡ್ರಗ್ಸ್ ಖರೀದಿಸಿ ತರುತ್ತಿದ್ದರು. ನಮಗೆ ಎಕ್ಸ್‌ಟಸಿ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಅನುಶ್ರೀಗೆ ಡ್ರಗ್ಸ್ ಪೆಡ್ಲರ್ಗಳ ಪರಿಚಯವಿದೆ. ಡ್ರಗ್ಸ್ ಎಲ್ಲಿ ಸಿಗುತ್ತೆ, ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು. ಡ್ರಗ್ಸ್ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ,'' ಎಂದು ಚಾರ್ಜ್ಶೀಟ್ನಲ್ಲಿ ಎ2 ಕಿಶೋರ್ ಶೆಟ್ಟಿ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.
"2007-08ರ ಸಮಯದಲ್ಲಿ ರಿಯಾಲಿಟಿ ಶೋ ನಡೆಯುತ್ತಿತ್ತು. ಆಗ ಅನುಶ್ರೀ, ತರುಣ್ ಹಾಗೂ ಕಿಶೋರ್ ಒಡನಾಟವಿತ್ತು ಎನ್ನಲಾಗಿದೆ. ಈ ಕುರಿತಂತೆ ಕಿಶೋರ್ ಶೆಟ್ಟಿ ಹೇಳಿಕೆ ನೀಡಿರುವಂತೆ, ನಟಿ ಅನುಶ್ರೀ, ತರುಣ್ ಹಾಗೂ ಕಿಶೋರ್ ಒಟ್ಟಿಗೆ ಡ್ರಗ್ಸ್ ಸೇವಿಸುತ್ತಿದ್ದರು. ಊಟಕ್ಕೂ ಮುನ್ನ ಡ್ರಗ್ಸ್ ಸೇವಿಸುತ್ತಿದ್ದರು," ಎಂದು ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ನೀಡಿದ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಆರೋಪಿ ಕಿಶೋರ್ ಹೇಳಿಕೆಯಿಂದ ಡ್ರಗ್ಸ್ ಪ್ರಕರಣಕ್ಕೆ ಮತ್ತಷ್ಟು ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.
ಆರೋಪಿಗಳ ಪಟ್ಟಿಯಲ್ಲಿ ಅನುಶ್ರೀ ಹೆಸರಿಲ್ಲ
ಆದರೆ ಮಂಗಳೂರಿನ ಸಿಸಿಬಿ ಪೊಲೀಸರು ಇದು ಕೇವಲ ಆರೋಪಿ ಹೇಳಿಕೆಯಷ್ಟೇ, ಆರೋಪಿಯ ಹೇಳಿಕೆ ಆಧರಿಸಿ ಅನುಶ್ರೀಯನ್ನು ಆರೋಪಿ ಎಂದು ಹೇಳಲು ಅಸಾಧ್ಯ ಅಂತಾ ಹೇಳಿದ್ದಾರೆ. ಡ್ರಗ್ಸ್ ಕೇಸ್‌ನಿಂದ ಆ್ಯಂಕರ್ ಅನುಶ್ರೀ ಹೆಸರನ್ನು ಪೊಲೀಸರು ಕೈ ಬಿಟ್ಟಿದ್ದು, ಆರೋಪಿಗಳ ಹೆಸರಿನ ಪಟ್ಟಿಯಿಂದ ಅನುಶ್ರೀಯನ್ನು ಕೈ ಬಿಟ್ಟಿದ್ದಾರೆ.
ಈಗಾಗಲೇ ಕೋರ್ಟ್‌ಗೆ ಚಾರ್ಜ್‌ಶೀಟ್‌ನ್ನು ಸಲ್ಲಿಕೆ ಮಾಡಿರುವ ಮಂಗಳೂರು ಸಿಸಿಬಿ ಪೊಲೀಸರು ಕಿಶೋರ್ ಅಮನ್, ತರುಣ್ ಸೇರಿದಂತೆ ನಾಲ್ವರನ್ನು ಆರೋಪಿ ಪಟ್ಟಿಗೆ ಸೇರಿಸಿದ್ದಾರೆ.
ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಅನ್ನುವುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ. 2007ರಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ್ದೆವು ಎಂಬ ಕಿಶೋರ್ ಹೇಳಿಕೆಗೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳು ಮತ್ತು ಅನುಶ್ರೀ ನಡುವೆ ಯಾವುದೇ ಫೋನ್ ಕರೆ ಸಂಭಾಷಣೆ ನಡೆದಿಲ್ಲ. ಚಾರ್ಜ್ಶೀಟ್‌ನಲ್ಲಿ ಕೇವಲ ಕಿಶೋರ್ ಹೇಳಿಕೆಯನ್ನು ಮಾತ್ರ ಉಲ್ಲೇಖಿಸಿದ್ದೇವೆ. ಆದರೆ ಆ ಹೇಳಿಕೆಗೆ ಯಾವುದೇ ಸಾಕ್ಷಿಯಿಲ್ಲ. ಹೀಗಾಗಿ ಅನುಶ್ರೀ ಹೆಸರನ್ನು ಪ್ರಕರಣದಿಂದ ಕೈ ಬಿಟ್ಟಿದ್ದೇವೆ ಎಂದು ಸಿಸಿಬಿ ಪೊಲೀಸ್ ಮೂಲಗಳು ತಿಳಿಸಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications