ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಪ್ತಾಚೆ ಸಂತ್ ಮಹಿಳೆಯರಿಗೆ ಪ್ರೋತ್ಸಾಹ ನೀಡುತ್ತಿದೆ:ಶಾಸಕ ವೇದವ್ಯಾಸ್ ಕಾಮತ್

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್.14: ಶ್ರೀ ವಿಠೋಭ ರುಕುಮಾಯಿ ದೇವಸ್ಥಾನ ಮತ್ತು ಶ್ರೀ ವೆಂಕಟರಮಣ ದೇವಸ್ಥಾನದ ಸಹಯೋಗದೊಂದಿಗೆ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹ ಪ್ರಯುಕ್ತ ನಗರದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ "ಸಪ್ತಾಚೆ ಸಂತ್ " ಸಾವಯವ/ಸ್ವಾವಲಂಬಿ ಸಂತೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕರಾದ ಡಿ ವೇದವ್ಯಾಸ್ ಕಾಮತ್ ಏಳು ದಿನಗಳ ಪರ್ಯಂತ ನಡೆಯಲಿರುವ ಸಪ್ತಾಹ ಸಂದರ್ಭದಲ್ಲಿ ನಗರದ ವಿವಿಧ ಪ್ರದೇಶಗಳಿಂದ ಸಾವಯವ ವಸ್ತುಗಳಿಂದ ತಯಾರಿಸಲ್ಪಟ್ಟ ಆಹಾರ ಪದಾರ್ಥಗಳು, ಮಹಿಳೆಯರು ತಮ್ಮ ತಮ್ಮ ಮನೆಯಲ್ಲೇ ತಯಾರಿಸಿದ ದಿನ ನಿತ್ಯ ವಸ್ತುಗಳು ಮಹಿಳೆಯರು ಸ್ವಾವಲಂಬಿಯಾಗಿ ವ್ಯಾಪಾರ ಮತ್ತು ವ್ಯವಹಾರ ನಡೆಸಲು ಅನುಕೂಲವಾಗಿದೆ.

Saptache Sant program is organized at Mangalore

ಊಟವಿಲ್ಲದೆ ಪರದಾಡಿದ ಜನರಿಗೆ ಆಹಾರ ವಿತರಿಸಿದ ಶಾಸಕ ವೇದವ್ಯಾಸ ಕಾಮತ್ಊಟವಿಲ್ಲದೆ ಪರದಾಡಿದ ಜನರಿಗೆ ಆಹಾರ ವಿತರಿಸಿದ ಶಾಸಕ ವೇದವ್ಯಾಸ ಕಾಮತ್

ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಸುತ್ತಿರುವುದು ಅಭಿನಂದಾರ್ಹ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಸಮಾಜದ ಸ್ವಾವಲಂಬಿ ಸಂತೆಗೆ ಪ್ರೋತ್ಸಾಹಿಸಬೇಕೆಂದು ತಿಳಿಸಿದರು.

Saptache Sant program is organized at Mangalore

ಸಿದ್ದು ಸರಕಾರದ ಅನ್ಯಾಯಗಳನ್ನು ಜನ ಹತ್ತಿರದಿಂದ ನೋಡಿದ್ದಾರೆ: ಶಾಸಕ ವೇದವ್ಯಾಸ ಕಾಮತ್ ಸಂದರ್ಶನಸಿದ್ದು ಸರಕಾರದ ಅನ್ಯಾಯಗಳನ್ನು ಜನ ಹತ್ತಿರದಿಂದ ನೋಡಿದ್ದಾರೆ: ಶಾಸಕ ವೇದವ್ಯಾಸ ಕಾಮತ್ ಸಂದರ್ಶನ

ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರ ಜಿ ಹನುಮಂತ ಕಾಮತ್, ಭಾಸ್ಕರ್ ಚಂದ್ರ ಶೆಟ್ಟಿ, ವಸಂತ ಪೂಜಾರಿ , ಮಂಗಲ್ಪಾಡಿ ನರೇಶ್ ಶೆಣೈ, ಗುರುಪುರ್ ಗೋಕುಲ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

English summary
"Saptache Sant" program is organized at Srinivasa Kalyana Mandapam, Mangalore.Program was inaugurated by MLA D Vedavyas Kamath
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X