ಸುಳ್ಯದಲ್ಲಿ ಬೆಂಕಿಗೆ ಆಹುತಿಯಾದ ಶಾಲಾ ಬಸ್, ತಪ್ಪಿದ ದುರಂತ
ಮಂಗಳೂರು, ಮಾರ್ಚ್ 15: ಶಾರ್ಟ್ ಸರ್ಕೂಟ್ ನಿಂದ ಶಾಲಾ ವಾಹನಕ್ಕೆ ಬೆಂಕಿ ತಗುಲಿ ಪೂರ್ತಿ ಭಸ್ಮವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇಲ್ಲಿಯ ಪ್ರತಿಷ್ಠಿತ ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್ಸೊಂದು ತಾಂತ್ರಿಕ ದೋಷದಿಂದ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಇಂದು ಹೊತ್ತಿ ಉರಿದಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್ಸು ಇಂದು ಮುಂಜಾನೆ ಶಾಲಾ ಮಕ್ಕಳನ್ನು ಕರೆತರಲು ತೆರಳುತ್ತಿದ್ದ ಸಂದರ್ಭ ಇದ್ದಕಿದ್ದಂತೆ ಹೊತ್ತಿ ಉರಿದಿದೆ. ಘಟನೆ ನಡೆದ ಸಂದರ್ಭ ಬಸ್ಸಿನಲ್ಲಿ ಮಕ್ಕಳು ಇರದ ಕಾರಣ ಯಾವುದೇ ದುರಂತ ಸಂಭವಿಸಲಿಲ್ಲ.

ಶಾಲಾ ಬಸ್ ಚಾಲಕ ನಿನ್ನೆ ರಾತ್ರಿ ಬಸ್ಸನ್ನು ತನ್ನ ಮನೆಯ ಪಕ್ಕ ನಿಲ್ಲಿಸಿದ್ದ ಎಂದು ಹೇಳಲಾಗಿದೆ. ಇಂದು ಮುಂಜಾನೆ ಶಾಲಾ ಮಕ್ಕಳನ್ನು ಕರೆತರಲು ತೆರಳುತಿದ್ದಾಗ ಈ ಘಟನೆ ನಡೆದಿದೆ. ಬಸ್ಸಿಗೆ ಬೆಂಕಿ ಹೊತ್ತಿದ ಸಂದರ್ಭದಲ್ಲಿ ಬಸ್ ಚಾಲಕ ಸೇರಿ ಇಬ್ಬರು ಬಸ್ಸಿನಿಂದ ಜಿಗಿದಿದ್ದಾರೆ . ಘಟನೆಯಲ್ಲಿ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications