School Holiday: ಬೆಳ್ತಂಗಡಿ ಸೇರಿದಂತೆ ಈ ಭಾಗದ ಶಾಲೆಗಳಿಗೆ ಮಾತ್ರ ರಜೆ ಘೋಷಣೆ
ಮಂಗಳೂರು, ಜುಲೈ 04: ಭೀಕರ ಬರಗಾಲದಿಂದ ತತ್ತರಿಸಿದ್ದ ಕರ್ನಾಟಕದಲ್ಲಿ ಇದೀಗ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎರಡು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಈ ಪ್ರದೇಶದಲ್ಲಿ ಹಳ್ಳ ತೊರೆಗಳು ಹೆಚ್ಚಾಗಿ ಹರಿಯುವ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎನ್ನುವ ದೃಷ್ಠಿಯಿಂದ ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೂಚನೆ ಮೇರೆಗೆ ರಜೆ ನೀಡಲಾಗಿದೆ.
ಬೈಂದೂರು ಶಿಕ್ಷಣ ವಲಯ ವ್ಯಾಪ್ತಿ ಶಾಲೆಗಳಿಗೆ ಇಂದು ರಜೆ ಘೋಷಣೆ
ಉಡುಪಿ: ಬೈಂದೂರು ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ವಲಯ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಣ ವಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಇಡೀ ಬೈಂದೂರು ತಾಲೂಕಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.












Click it and Unblock the Notifications