School Holidays: ಭಾರೀ ಮಳೆ ಮುನ್ಸೂಚನೆ, ಕರ್ನಾಟಕದ ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು, ಜೂನ್ 12: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಳೆ ಮುಂದುವರಿದಿದೆ. ಅದರಲ್ಲೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದ್ದು, ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ 'ರೆಡ್ ಅಲರ್ಟ್' ನೀಡಲಾಗಿದೆ. ಈ ಸಂಬಂಧ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲೆಗಳಿಗೆ ರಜೆ ಘೋಷಣೆ ಗುರುವಾರ ಆದೇಶಿಸಿದೆ. ಜೊತೆಗೆ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರಮುಖ ಸೂಚನೆಗಳನ್ನು ಹೊರಡಿಸಿದೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆ ಇದೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 12ರಂದು ರಜೆ ಘೋಷಿಸಿದೆ. ಜೊತೆಗೆ ಈ ಕೆಳಗಿನ ಒಂದಷ್ಟು ಕ್ರಮ ಕೈಗೊಂಡಿದೆ.

* ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
* ಮೀನುಗಾರರು ಸಮುದ್ರಕ್ಕೆ ಇಳಿಯಕೂಡದು. ಸಹಕರಿಸುವಂತೆ ಈ ಮೂಲಕ ಸೂಚನೆ ನೀಡಿದೆ.
* ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು.
* ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
* ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ನಿರ್ದೇಶಿಸಿದೆ.
* ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರುವಂತೆ ಹೇಳಿದೆ.
* ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿಗೆ (1077 / 0824 2442590) ಸಂಪರ್ಕಿಸುವಂತೆ ತಿಳಿಸಿದೆ.
* ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಭಾರೀ ಮಳೆ ಮುನ್ಸೂಚನೆ ಸಹ ಇದೆ. ಸರ್ಕಾರ ಕೊಡಗು ಹಾಗೂ ಉಡುಪಿ ಜಿಲ್ಲೆಗಳ ಶಾಲೆಗಳಿಗೆ ಜೂನ್ 12ರಂದು ರಜೆ ಘೋಷಣೆ ಮಾಡಿ ಬುಧವಾರ ಆದೇಶಿಸಿದೆ.












Click it and Unblock the Notifications