ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಬೋಲಾ ತಪಾಸಣೆ
ಮಂಗಳೂರು, ಆ.11 : ವಿಶ್ವದಲ್ಲಿ ಆಂತಕ ಸೃಷ್ಟಿಸಿರುವ ಎಬೋಲಾದ ಬಗ್ಗೆ ಮುನ್ನಚ್ಚರಿಕೆ ನೀಡಲು ಮತ್ತು ತಪಾಸಣೆ ನಡೆಸಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕೇಂದ್ರವೊಂದನ್ನು ಆರಂಭಿಸಲಾಗಿದೆ. ಒಂದು ವೇಳೆ ಎಬೋಲಾ ರೋಗಿಗಳು ಪತ್ತೆಯಾದರೆ ಅವರಿಗೆ ಚಿಕಿತ್ಸೆ ಒದಗಿಸಲು ವೆನ್ ಲಾಕ್ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ವಿಶೇಷ ವಾರ್ಡ್ ಸ್ಥಾಪಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ವಿಮಾನ ನಿಲ್ದಾಣದ ನಿರ್ದೇಶಕ ರಾಧಾಕೃಷ್ಣ ಅವರು, ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಎಬೋಲಾ ಬಗ್ಗೆ ಮಾಹಿತಿ ನೀಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಎಬೋಲಾ ತಪಾಸಣೆಗೆ ವಿಶೇಷ ಕೇಂದ್ರ ಆರಂಭಿಸಲಾಗಿದೆ. ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ಒಳಗೊಂಡ ತಂಡ ಇಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

ಹೊರ ದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆ ಜತೆಗೆ ಎಬೋಲಾ ರೋಗದ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಈ ತಂಡ ಮಾಹಿತಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಿಲಿದೆ. ಒಂದು ವೇಳೆ ಎಬೋಲಾ ರೋಗಿಗಳು ಪತ್ತೆಯಾದರೆ ಅವರಿಗೆ ಚಿಕಿತ್ಸೆ ಒದಗಿಸಲು ವೆನ್ ಲಾಕ್ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ವಿಶೇಷ ವಾರ್ಡ್ ಸ್ಥಾಪಿಸಲಾಗಿದೆ ಎಂದರು. [ಸಾಂಕ್ರಾಮಿಕ ಎಬೋಲಾ : 24/7 ಭಾರತ ಸಹಾಯವಾಣಿ]
ಎಬೋಲಾ ರೋಗ ಪೂರ್ವ ಆಫ್ರಿಕಾ ದೇಶಗಳಲ್ಲಿ ಹೆಚ್ಚಾಗಿದೆ. ಕರ್ನಾಟಕಕ್ಕೆ ಅದರಲ್ಲೂ ಮಂಗಳೂರಿಗೆ ಈ ದೇಶಗಳಿಂದ ಬರುವ ಪ್ರಯಾಣಿಕರು ಹೆಚ್ಚಾಗಿದ್ದಾರೆ. ಆದ್ದರಿಂದ ವಿಮಾನ ನಿಲ್ದಾಣದಲ್ಲಿ ವಿಶೇಷ ಕೇಂದ್ರ ತೆರೆಯಲಾಗಿದೆ ಎಂದು ರಾಧಾಕೃಷ್ಣ ಅವರು ಮಾಹಿತಿ ನೀಡಿದರು.

ಸಚಿವರು ಹೇಳುವುದೇನು : ಕರ್ನಾಟಕದಲ್ಲಿಯೂ ಎಬೋಲಾ ಸೋಂಕು ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಬಂದಿಳಿಯುವ ವಿದೇಶಿ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


Click it and Unblock the Notifications
