ಬಂಟ್ವಾಳ: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ

ಮಂಗಳೂರು, ಜುಲೈ 14: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು ಕೈಕೈ ಮೀಲಾಯಿಸಿದ್ದಾರೆ.

ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸುವ ನಿರ್ಧಾರ ಮಾಡಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಾವಳಮುಡೂರು ಗ್ರಾಮ ಪಂಚಾಯತ್‌ನಲ್ಲಿ ಜಮಾಯಿಸಿದ್ದರು. ಕಾವಳಮೂಡೂರು ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದರೆ, ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆ ಏರಿಕೆ ವಿರೋಧಿಸಿ ಪ್ರತಿಭಟನೆ ಮಾಡಿದ್ದಾರೆ.

ಬಿಜೆಪಿ ಪರವಾಗಿದ್ದ ಆರ್‌ಟಿಐ ಕಾರ್ಯಕರ್ತ ಪದ್ಮನಾಭಮಯ್ಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದು, ಈ ಸಂದರ್ಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆದಿದೆ.

Mangaluru: Scuffle Broke Out Between Congress And BJP Workers In Bantwal

ಈ ವೇಳೆ ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪುಂಜಾಲಕಟ್ಟೆ ಎಸ್ಐ ಸೌಮ್ಯ ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಕಾರ್ಯಕರ್ತರನ್ನು ಲಾಟಿ ಬೀಸಿ ಪೊಲೀಸರು ಚದುರಿಸಿದ್ದಾರೆ. ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+