ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಳ್ಳಾಲ, ಸೋಮೇಶ್ವರದಲ್ಲಿ ಮಳೆಗೆ ಮತ್ತೆ ಕಡಲ್ಕೊರೆತ

|
Google Oneindia Kannada News

ಮಂಗಳೂರು, ಆಗಸ್ಟ್ 5: ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಕಡಲು ಪ್ರಕ್ಷುಬ್ಧಗೊಂಡಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಕೆಲ ಭಾಗದಲ್ಲಿ ಕಡಲ ಕೊರೆತ ಉಂಟಾಗುತ್ತಿದೆ. ಕಡಲ ತಡಿಯಲ್ಲಿ ವಾಸಿಸುವ ಜನರು ಆತಂಕಗೊಂಡಿದ್ದಾರೆ.

 ಕರಾವಳಿಯಲ್ಲಿ ಮುಂದುವರೆದಿದೆ ಮಳೆ, ಭಾರೀ ಕಡಲ ಕೊರೆತ ಕರಾವಳಿಯಲ್ಲಿ ಮುಂದುವರೆದಿದೆ ಮಳೆ, ಭಾರೀ ಕಡಲ ಕೊರೆತ

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದ ಬಿಟ್ಟು ಬಿಟ್ಟು ಭಾರೀ ಮಳೆಯಾಗುತ್ತಿದೆ. ಪುತ್ತೂರು, ಬೆಳ್ತಂಗಡಿ, ಮೂಲ್ಕಿ, ವಿಟ್ಲ, ಅನಂತಾಡಿ, ಸುರತ್ಕಲ್, ಕಡಬ, ಉಪ್ಪಿನಂಗಡಿ, ವೇಣೂರು, ನಾರಾವಿ, ಗುರುವಾಯನಕೆರೆ, ಧರ್ಮಸ್ಥಳ, ಕನ್ಯಾನ, ಬಿ.ಸಿ.ರೋಡು, ಮಾಣಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ, ನ್ಯೂ ಉಚ್ಚಿಲ, ಉಳ್ಳಾಲದ ಕಿಲೇರಿಯಾನಗರ, ಕೈಕೋ, ಮುಕ್ಕಚ್ಚೇರಿಯಲ್ಲಿ ಕಡಲ್ಕೊರೆತವಾಗಿದೆ.

Sea Erosion In Ullala And Someshwara

ಮಂಗಳೂರು ತೀರದಲ್ಲಿ ಹೆಚ್ಚಿದ ಕಡಲ ಕೊರೆತ; ಮನೆಗಳಿಗೆ ಹಾನಿಮಂಗಳೂರು ತೀರದಲ್ಲಿ ಹೆಚ್ಚಿದ ಕಡಲ ಕೊರೆತ; ಮನೆಗಳಿಗೆ ಹಾನಿ

ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಬಳಿ ಅಪಾಯದಲ್ಲಿರುವ ರಸ್ತೆಗೆ ಹಾಕಲಾಗಿರುವ ಕಲ್ಲುಗಳು ಕೊರೆತಕ್ಕೆ ಕುಸಿತ ಕಂಡರೆ, ನ್ಯೂ ಉಚ್ಚಿಲದಲ್ಲಿ ಸಮುದ್ರ ಕೊರೆತವಾಗಿದ್ದು ಕಲ್ಲುಗಳು ಸಮುದ್ರಪಾಲಾಗಿವೆ.

English summary
sea erosion aggravated in Someshwara, Uchilla near Ullala at Mangaluru and other parts of Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X