ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಬಲಿ-ಬಂಟ್ವಾಳದಲ್ಲಿ ಮೃತಪಟ್ಟ ಮಹಿಳೆ ಅತ್ತೆಯೂ ಸಾವು
ಮಂಗಳೂರು, ಏಪ್ರಿಲ್ 24: ಬಂಟ್ವಾಳದಲ್ಲಿ ಈ ಹಿಂದೆ ಮೃತಪಟ್ಟಿದ್ದ ಮಹಿಳೆಯ ಅತ್ತೆಯಲ್ಲೂ ಗುರುವಾರ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ.
ಗುರುವಾರ ಅವರಲ್ಲಿ ಸೋಂಕು ದೃಢಪಟ್ಟಿದ್ದು, ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ 75ರ ಹರೆಯದ ಮಹಿಳೆ ನಿನ್ನೆ ಸಂಜೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಏಪ್ರಿಲ್ 20ರಂದು ಬಂಟ್ವಾಳ ಮೂಲದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದು, ಅವರಿಗೆ ಕೊರೊನಾ ಇದ್ದದ್ದು ನಂತರ ತಿಳಿದುಬಂದಿತ್ತು. ಅವರ ಅತ್ತೆಯನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಗಂಟಲ ದ್ರವವನ್ನು ಪರೀಕ್ಷೆಗೆ ರವಾನಿಸಿದ್ದು, ನಿನ್ನೆ ಅವರಿಗೂ ಕೊರೊನಾ ಸೋಂಕು ಇದ್ದದ್ದು ದೃಢಪಟ್ಟಿದೆ. ಈ ಬಗ್ಗೆ ಮಧ್ಯಾಹ್ನ ವರದಿ ಆರೋಗ್ಯ ಇಲಾಖೆಯ ಕೈ ಸೇರಿತ್ತು. ಆದರೆ ಸಂಜೆಯೇ ಅವರು ಮೃತಪಟ್ಟಿದ್ದಾರೆ.
ಈ ಮೂಲಕ ಬಂಟ್ವಾಳದ ಒಂದೇ ಕುಟುಂಬದ ಇಬ್ಬರನ್ನು ಕೊರೊನಾ ಬಲಿ ಪಡೆದುಕೊಂಡಿದೆ.












Click it and Unblock the Notifications