ಬಂಟ್ವಾಳ ತಾಲೂಕಿನಾದ್ಯಂತ ಜೂನ್ 9ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು, ಜೂನ್ 01 : ಕಲ್ಲಡ್ಕದಲ್ಲಿ ಮುಸ್ಲಿಂ ಯುವಕರ ಮೇಲೆ ಹಿಂದೂ ಯುವಕರ ತಂಡ ಹಲ್ಲೆ ಮಾಡಿದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ತಾಲೂಕಿನಾದ್ಯಂತ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.

ಮೇ 27ರಿಂದ ಜೂನ್ 2ರ ವರೆಗೆ ಇದಂತಹ ನಿಷೇಧಾಜ್ಞೆಯನ್ನು ಜೂನ್ 9ರ ರಾತ್ರಿ 12 ಗಂಟೆಯವರೆಗೆ ವಿಸ್ತರಿಸುವಂತೆ ಉಪ ವಿಭಾಗ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತ ಎ.ಸಿ. ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ. [ಕಲ್ಲಡ್ಕದಲ್ಲಿ ಮುಸ್ಲಿಂ ಯುವಕರ ಮೇಲೆ ಹಿಂದೂಗಳ ಹಲ್ಲೆ]

Section 144 extended till June 9 in Bantwal Taluk

ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ.

ಯಾವುದೇ ರೀತಿಯ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ನಿಷೇಧಾಜ್ಞೆ ಅವಧಿಯಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ, ಬೀದಿ, ಓಣೆ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+