ಕಾವ್ಯಾ ಸಾವು ಸಿಐಡಿಗೆ ಒಪ್ಪಿಸಲು ಅರೆಬೆತ್ತಲೆ ಪ್ರತಿಭಟನೆಗೆ ಯತ್ನ
ಮಂಗಳೂರು, ಸೆಪ್ಟೆಂಬರ್ 23: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವಂತೆ ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ ನಡೆಸಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶನಿವಾರ ನಗರದ ಹಂಪನಕಟ್ಟೆ ಸಿಗ್ನಲ್ ಬಳಿಯಿಂದ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಪೋಲಿಸರು ಅರೆಬೆತ್ತಲೆ ಪ್ರತಿಭಟನೆಯನ್ನು ನಡೆಸದಂತೆ ಪ್ರತಿಭಟನಕಾರರಿಗೆ ಸೂಚಿಸಿದ್ದರು. ಇದಕ್ಕೆ ಕ್ಯಾರೆ ಎನ್ನದೆ ಎಬಿ ಶೆಟ್ಟಿ ಸರ್ಕಲ್ ಬಳಿ ಮೆರವಣಿಗೆಯಲ್ಲಿ ತೆರಳಿ ಅರೆಬೆತ್ತಲೆ ಪ್ರತಿಭಟನೆಗೆ ಮುಂದಾದ ವೇಳೆ ಕಾವ್ಯಳ ತಾಯಿ ಬೇಬಿ, ತಂದೆ ಲೋಕೇಶ್, ತಂಗಿ ಸೇರಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಲಯನ್ ಅನಿಲ್ ದಾಸ್ ,ತಾಲೂಕಾಧ್ಯಕ್ಷ ಮಧುಸೂದನ್ ಗೌಡ ಸೇರಿದಂತೆ ಇತರ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ಅಂಗಿ ಬಿಚ್ಚಿದ ಏಳು ಮಂದಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಕಾವ್ಯಾ(16) ಜುಲೈನಲ್ಲಿ ಅಸಹಜ ರೀತಿಯಲ್ಲಿ ಸಾವಿಗೀಡಾಗಿದ್ದರು.












Click it and Unblock the Notifications