ಮಾಜಿ ಸಚಿವ, ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ನಿಧನ

ಮಂಗಳೂರು, ಜನವರಿ 27: ಜೆಡಿಎಸ್‌ನ ಹಿರಿಯ ನಾಯಕ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ (80) ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದರು.

ಹಲವು ದಶಕ ಜನತಾಪರಿವಾರದಲ್ಲಿಯೇ ಸಕ್ರಿಯರಾಗಿದ್ದ ಅವರು, ಬೇರೆ ಪಕ್ಷಗಳಿಂದ ಆಹ್ವಾನ ಬಂದಿದ್ದರೂ ಕೊನೆಯವರೆಗೂ ಜೆಡಿಎಸ್‌ನಲ್ಲಿಯೇ ಉಳಿದುಕೊಂಡಿದ್ದರು.

ಅಮರನಾಥ ಶೆಟ್ಟಿ ಅವರು 1965ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಕಾರ್ಕಳ ತಾಲ್ಲೂಕಿನ ಪಾಲಡ್ಕ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಆರಂಭಿಕ ರಾಜಕೀಯ ಬದುಕು ನಡೆಸಿದ್ದರು. ನಂತರ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲ್ಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷರಾಗಿ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

ಸತತ ಮೂರು ಬಾರಿ ಶಾಸಕ

ಸತತ ಮೂರು ಬಾರಿ ಶಾಸಕ

ಮೂಡಬಿದರೆ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಜನತಾದಳದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 1983ರಲ್ಲಿ ಮೊದಲ ಬಾರಿಗೆ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. 1987, 1994ರಲ್ಲಿ ಕೂಡ ಜಯಗಳಿಸಿದ್ದರು. ಆಗಿನ ಜನತಾ ಪರಿವಾರದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಎರಡು ಬಾರಿ ಸಚಿವರಾಗಿದ್ದರು

ಎರಡು ಬಾರಿ ಸಚಿವರಾಗಿದ್ದರು

ರಾಮಕೃಷ್ಣ ಹೆಗಡೆ ಸರ್ಕಾರ ಹಾಗೂ 1999ರಲ್ಲಿ ಜೆಎಚ್ ಪಟೇಲ್ ಅವರ ಸರ್ಕಾರದಲ್ಲಿ ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿದ್ದರು. ಸಚಿವರಾಗಿದ್ದರು. ನಂತರದ ಚುನಾವಣೆಗಳಲ್ಲಿ ಸತತವಾಗಿ ಮೂರು ಬಾರಿ ಸೋಲು ಅನುಭವಿಸಿದ್ದರು. ಅಭಯಚಂದ್ರ ಎದುರು ಸೋಲು ಅನುಭವಿಸಿದ ನಂತರ ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಅವರು 2016ರಲ್ಲಿ ರಾಜಕೀಯದಿಂದ ನಿವೃತ್ತರಾಗಿದ್ದರು.

ಮಾಜಿ ಪ್ರಧಾನಿ ದೇವೇಗೌಡ ಸಂತಾಪ

ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಶೋಕ

ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ.ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ‌ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+