RSS ಶರತ್ ಹತ್ಯೆಯ ಪ್ರಮುಖ ಆರೋಪಿ ಬಂಧನ

ಮಂಗಳೂರು, ಆಗಸ್ಟ್ 21: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಜುಲೈ 04ರಂದು ಬಂಟ್ವಾಳದ ಬಿ.ಸಿ ರೋಡ್ ನಲ್ಲಿ ರಾತ್ರಿ ಬೈಕಿನಲ್ಲಿ ಬಂದ 3 ಮಂದಿ ದುಷ್ಕರ್ಮಿಗಳ ತಂಡ ಶರತ್ ಮಡಿವಾಳ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿತ್ತು. ಈ 3 ಮಂದಿ ಆರೋಪಿಗಳ ಪೈಕಿ ಸೋಮವಾರ ಮೈಸೂರಿನಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

Sharath Madivala murder Maim accused arrested in Mysuru

ಬಂಧಿತ ಆರೋಪಿಯನ್ನು ಶರೀಫ್ ಎಂದು ಗುರುತಿಸಲಾಗಿದ್ದು, ಈತನನ್ನು ಮೈಸೂರಿನಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿದೆ.

ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಈಗ ಎಂಟಕ್ಕೆ ಏರಿದೆ. ಇವರಲ್ಲಿ ಶರೀಫ್ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ.

ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಈಗಾಗಲೇ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಸಂಶಯ ವ್ಯಕ್ತವಾಗಿವೆ.

ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು ವಿದೇಶಕ್ಕೆ ಪರಾರಿಯಾಗಿರುವ ಆರೋಪಿಯ ಬಂಧನಕ್ಕೂ ಪೊಲೀಸರು ತಂತ್ರ ರೂಪಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+