ಶರತ್ ಮಡಿವಾಳ ಹತ್ಯೆ, ಪಿಎಫ್ ಐ ಕಾರ್ಯಕರ್ತರ ಬಂಧನ

ಮಂಗಳೂರು, ಆಗಸ್ಟ್ 16: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದಾರೆ.

ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್ ಐ ಸಂಘಟನೆಯ ಕಾರ್ಯಕರ್ತ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಅಬ್ದುಲ್ ಶಾಫಿ ಅಲಿಯಾಸ್ ಶಾಫಿ (36), ಚಾಮರಾಜನಗರದ ಪಿಎಫ್ ಐ ಸಂಘಟನೆಯ ಜಿಲ್ಲಾಧ್ಯಕ್ಷ ಗಾಳಿಪುರ ಗ್ರಾಮದ ಖಲೀಲುಲ್ಲಾ (30) ಎಂಬವರನ್ನು ಬಂಧಿಸಲಾಗಿದೆ ಎಂದು ಹೇಳಿದರು.

Sharath Madiwala murder, two PFI workers arrested

ಬಂಧಿತ ಆರೋಪಿಗಳಿಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ತನಿಖೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳಿದ್ದು, ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಶೀಘ್ರದಲ್ಲೇ ಅವರನ್ನೂ ಬಂಧಿಸುವುದಾಗಿ ಐಜಿಪಿ ಹರಿಶೇಖರನ್ ತಿಳಿಸಿದ್ದಾರೆ.

ಶರತ್ ಮಡಿವಾಳ ಕೊಲೆ ಪ್ರಕರಣದ ತನಿಖೆಗಾಗಿ 7 ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಮಂದಿಯನ್ನು ವಿಚಾರಣೆಗೊಳಪಡಿಸಲಾಗಿತ್ತು ಎಂದು ಹೇಳಿದರು.

ತನಿಖಾ ತಂಡಗಳು ಆರೋಪಿಗಳ ಪತ್ತೆಗಾಗಿ ಮಹಾರಾಷ್ಟ್ರ, ಕೇರಳ, ಬೆಂಗಳೂರು, ಶಿವಮೊಗ್ಗ, ಕಾರವಾರ ಮುಂತಾದ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದವು. ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ತನಿಖಾ ತಂಡವು ಯಶಸ್ವಿಯಾಗಿದೆ ಎಂದು ತಿಳಿಸಿದರು.

ಈ ಮಧ್ಯೆ ಕಲಂದರ್ ಹಾಗೂ ಶರೀಫ್ ಎಂಬವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತಂಡಕ್ಕೆ ಬಹುಮಾನ
ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸ್ ತಂಡಕ್ಕೆ ಐಜಿಪಿ ಹರಿಶೇಖರನ್ 25,000 ರುಪಾಯಿ ಬಹುಮಾನ ಘೋಷಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+