• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿರಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರಗಳು; ವಾಹನ ಸಂಚಾರ ಬಂದ್

|

ಮಂಗಳೂರು ಆಗಸ್ಟ್ 7 : ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಎಂಟು, ಒಂಬತ್ತು ಹಾಗೂ ಎರಡನೇ ತಿರುವಿನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, 10 ಕಡೆ ಮರಗಳು ಧರೆಗೆ ಉರುಳಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ, ಎರಡು ದಿನ ರೆಡ್ ಅಲರ್ಟ್

ಘಾಟಿ ರಸ್ತೆಯ ಎಂಟು ಮತ್ತು ಒಂಬತ್ತನೆ ತಿರುವಿನಲ್ಲೂ ಗುಡ್ಡ ಜರಿದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಭಾರಿ ಮಳೆ ಸುರಿಯುತ್ತಿರುವ ಕಾರಣ ನೀರೆಲ್ಲ ರಸ್ತೆಯಲ್ಲಿ ಹರಿದು ವಾಹನ ಚಾಲಕರು ಪರದಾಡಿದರು.

ಇನ್ನೆರಡು ದಿನ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಬಂದ್

ಈ ನಡುವೆ ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟ್ ನಲ್ಲೂ ರಸ್ತೆ ಸಂಚಾರ ಬಂದ್ ಮಾಡಲಾಗಿದೆ . ಘಟ್ಟ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘಾಟ್ ರಸ್ತೆಯಲ್ಲಿ ಹವಲಾರು ಮರುಗಳು ಉರುಳಿವೆ.

ಉಳ್ಳಾಲ, ಸೋಮೇಶ್ವರದಲ್ಲಿ ಮಳೆಗೆ ಮತ್ತೆ ಕಡಲ್ಕೊರೆತ

ಶಿರಾಡಿ ಘಾಟ್ ರಸ್ತೆಯ ನಾಲ್ಕು ಕಡೆಗಳಲ್ಲಿ ರಸ್ತೆಗೆ ಮರಗಳು ಉರುಳಿ ಬಿದ್ದಿವೆ. ಈ ಹಿನ್ನೆಲೆಯಲ್ಲಿ ವಾಹಾನ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಸ್ಥಳೀಯರಿಂದ ಮರ ತೆರವುಗೊಳಸುವ ಕಾರ್ಯಾಚರಣೆ ನಡೆಸಲಾಗುತ್ತದೆ. ಮರಗಳು ರಸ್ತೆಗೆ ಉರುಳಿದ ಪರಿಣಾಮ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ತಡೆ ಹಿಡಿಯಲಾಗಿದ್ದು ಕೀಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ.

English summary
Shiradi Ghat main road which will connect Bangaluru and Managluru closed for vehicle due to landslide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X