ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾಡಿ ಘಾಟ್ ಬಳಿ ಭೂಕುಸಿತ; ಮಂಗಳೂರು-ಬೆಂಗಳೂರು ಹೆದ್ದಾರಿ ಬಂದ್; ಬದಲಿ ಮಾರ್ಗ ಇಲ್ಲಿದೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75ರ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಎಂಬಲ್ಲಿ ಭೂಕುಸಿತವಾಗಿದೆ. ಇದರಿಂದ ಶಿರಾಡಿ ಘಾಟ್ ಮುಖಾಂತರ ಸಂಚರಿಸುವ ಎಲ್ಲಾ ವಾಹನಗಳಿಗೆ ಶಿರಾಡಿ ಆರಂಭದ ಗುಂಡ್ಯ ಪ್ರದೇಶದಲ್ಲಿ ತಡೆಹಿಡಿಯಲಾಗಿದೆ.

Recommended Video

ಶಿರಾಡಿ ಘಾಟ್ ಬಳಿ ಭೂಕುಸಿತ; ಮಂಗಳೂರು-ಬೆಂಗಳೂರು ಹೆದ್ದಾರಿ ಬಂದ್ | Oneindia Kannada

ಶಿರಾಡಿ ಘಾಟ್‌ನ ನಾಲ್ಕು ಕಡೆಗಳಲ್ಲಿ ಗುಡ್ಡ ಕುಸಿತವಾಗಿದ್ದರಿಂದ, ಇನ್ನೂ ನಾಲ್ಕು ದಿನಗಳ‌ ಕಾಲ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ರಸ್ತೆ ಮುಚ್ಚಲಿದೆ. ದೋಣಿಗಲ್‌ನಲ್ಲಿ ಭಾರೀ ಪ್ರಮಾಣದಲ್ಲಿ ಹೆದ್ದಾರಿ ಕುಸಿತವಾಗಿದ್ದು, ಬೆಂಗಳೂರು ಸಂಪರ್ಕಿಸುವ ಜನರು ಬದಲಿ ಮಾರ್ಗವನ್ನು ಸೂಚಿಸುವಂತೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಹಾಸನ ಪೊಲೀಸ್ ಇಲಾಖೆ ಜನರಿಗೆ ಸೂಚಿಸಿದೆ.

Shiradi Ghat Closed For Traffic After Major Landslide Near Donigal

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಚಾರ್ಮಾಡಿ ಘಾಟ್ ಮುಖಾಂತರ ಸಂಚಾರ ಮಾಡುವುದಕ್ಕೆ ಸೂಚಿಸಲಾಗಿದೆ. ಮಂಗಳೂರು ಭಾಗದಿಂದ ಬೆಂಗಳೂರು ಭಾಗಕ್ಕೆ ಹೋಗುವವರು ಚಾರ್ಮಾಡಿ, ಕೊಟ್ಟಿಗೆಹಾರ, ಮೂಡಿಗೆರೆ, ಹಾನ್ಬಾಲ್, ಬೇಲೂರು, ಹಾಸನ, ಬೆಂಗಳೂರು ಮಾರ್ಗವಾಗಿ ಸಂಚಾರ ಮಾಡುವುದಕ್ಕೆ ಪೊಲೀಸ್ ಇಲಾಖೆ ನಿರ್ದೇಶನ ನೀಡಿದೆ.

Shiradi Ghat Closed For Traffic After Major Landslide Near Donigal

ಅಲ್ಲದೇ ಘನ ವಾಹನಗಳು ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಮೂಲಕವೂ ಬೆಂಗಳೂರಿಗೆ ಸಂಪರ್ಕಿಸಲು ಸೂಚಿಸಿದೆ. ಹೆದ್ದಾರಿ ಕುಸಿತದ ಮಾಹಿತಿ ಇಲ್ಲದೇ ಹಲವು ವಾಹನಗಳ ಶಿರಾಡಿ ರಸ್ತೆಯಲ್ಲಿ ಸಂಚರಿಸಿದ್ದು, ಕೆಲವು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

English summary
Landslide near Shiradi Ghat, Mangaluru-Bangaluru National Highway -75 Closed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X