Shiradi Ghat Highway: ಶಿರಾಡಿ ಘಾಟಿ ಹೆದ್ದಾರಿ ವಿಸ್ತರಣೆ ಕುರಿತು ಅಪ್ಡೇಟ್

ರಾಜ್ಯದಲ್ಲಿ ಇದೀಗ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ. ಇನ್ನೂ ಕೆಲವು ಮುಕ್ತಾಯದ ಹಂತದಲ್ಲಿವೆ. ಇನ್ನು ಇದೀಗ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಭೇಟಿ ಮಾಡಿ ಶಿರಾಡಿ ಘಾಟಿ ಬೈಪಾಸ್ ಯೋಜನೆ ಅನುಷ್ಠಾನ ಸೇರಿ ಬೆಂಗಳೂರು-ಮಂಗಳೂರು ಹೆದ್ದಾರಿ ಸಂಪರ್ಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತಂತೆ ಚರ್ಚೆ ಮಾಡಿದರು.

ಮಂಗಳೂರು-ಬೆಂಗಳೂರು ಹೆದ್ದಾರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ ರಾಜ್ಯ ಸರ್ಕಾರದ ಹಂತದಲ್ಲಿ ಇಲಾಖಾಧಿಕಾಗಳಿಂದ ವಿಳಂಬ ಆಗುತ್ತಿದೆ. ಸಚಿವರು ತುರ್ತಾಗಿ ಮಧ್ಯಪ್ರವೇಶ ಮಾಡಿ ಎದುರಾಗುವ ಎಲ್ಲಾ ಅಡೆ-ತಡೆ ನಿವಾರಣೆಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದರಲ್ಲಿಯೂ ಶಿರಾಡಿ ಘಾಟಿ ಮಾರ್ಗವನ್ನು ಮೇಲ್ದರ್ಜೆಗೇರಿಸಲು ಸೂಕ್ತ ಪಥಗಳ ನಿಗದಿ ಹಾಗೂ ಯೋಜನೆಗೆ ಅರಣ್ಯ ಇಲಾಖೆಯ ಮಂಜೂರಾತಿ ಪಡೆಯುವ ಪ್ರಕ್ರಿಯೆ ಚುರುಕುಗೊಳಿಸಬೇಕೆಂದು ಮನವಿ ಮಾಡಿದರು.

Shiradi Ghat Highway expansion Update

ಶಿರಾಡಿ ಘಾಟಿಯಲ್ಲಿ ಬಹುಪಥಗಳ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅನುಮತಿ ನೀಡುವ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗಿರುವ ಹಿನ್ನೆಲೆ ಯೋಜನೆ ಅನುಷ್ಠಾನಕ್ಕೆ ಹಿನ್ನಡೆ ಆಗಿದೆ. ಅದರಲ್ಲೂ ಪ್ರಮುಖವಾಗಿ ಕರ್ನಾಟಕ ಸರ್ಕಾರದಿಂದ ಅರಣ್ಯ ಇಲಾಖೆಯ ಅನುಮತಿ ಬಾಕಿಯಿರುವ ಕಾರಣ ಈ ಯೋಜನೆ ಕಾರ್ಯರೂಪಕ್ಕೆ ತರುವುದಕ್ಕೆ ವಿಳಬವಾಗುತ್ತಿದೆ. ಆದ್ದರಿಂದ ಶಿರಾಡಿ ಘಾಟಿ ರಸ್ತೆ ವಿಸ್ತರಣೆಗೆ ರಾಜ್ಯ ಸರ್ಕಾರದ ಕಡೆಯಿಂದ ಎದುರಾಗಿರುವ ಅಡೆ-ತಡೆ ನಿವಾರಣೆಗೆ ಹೆದ್ಧಾರಿ ಸಚಿವಾಲಯದ ಕಡೆಯಿಂದ ಮಧ್ಯಸ್ಥಿಕೆ ವಹಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ನಿತಿನ್‌ ಗಡ್ಕರಿ ಅವರಿ ಪ್ರತಿಕ್ರಿಯಿಸಿ, ಶಿರಾಡಿ ಘಾಟಿ ಮೇಲ್ದರ್ಜೆಗೇರಿಸುವುದಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ ಇರುವ ಎಲ್ಲಾ ರೀತಿಯ ಅನುಮತಿ ಹಾಗೂ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಮುಂದಿನ ಹಂತದ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಮತ್ತೊಂದೆಡೆ ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಣೆ ಮಡುವುದಕ್ಕೆ ರೈಲ್ವೆ ಇಲಾಖೆ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್‌ ಅಂದರೆ ಇದೇ ತಿಂಗಳ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+