ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಜುಲೈ 16ರೊಳಗೆ ಶಿರಾಡಿ ಘಾಟಿ ರಸ್ತೆ ಸಂಚಾರಕ್ಕೆ ಮುಕ್ತ'

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು ಜುಲೈ 9: ಶಿರಾಡಿ ಘಾಟಿ ರಸ್ತೆಯನ್ನು ಜುಲೈ 16ರೊಳಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಸಂಬಂಧ ಸೋಮವಾರ ಸಚಿವರು, ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಶಿರಾಡಿ ಘಾಟ್‌ ರಸ್ತೆ ಜುಲೈ 15ಕ್ಕೆ ವಾಹನಗಳಿಗೆ ಮುಕ್ತವಾಗಲ್ಲ?ಶಿರಾಡಿ ಘಾಟ್‌ ರಸ್ತೆ ಜುಲೈ 15ಕ್ಕೆ ವಾಹನಗಳಿಗೆ ಮುಕ್ತವಾಗಲ್ಲ?

ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯ ಹಂತಕ್ಕೆ ಬಂದಿವೆ. ಜುಲೈ16ರೊಳಗೆ ರಸ್ತೆಯನ್ನು ಸಂಚಾರಕ್ಕೆ ಅನುವು ಮಾಡಿಕೊಡುವ ಕುರಿತು ಈಗಾಗಲೇ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ದಿನಾಂಕ ಕೇಳಲಾಗಿದೆ. ಕೇಂದ್ರದ ಮಾಜಿ ರಸ್ತೆ ಸಾರಿಗೆ ಸಚಿವ ಆಸ್ಕರ್ ಫರ್ನಾಂಡಿಸ್, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

UT Khader Meeting

ಮಳೆಯಿಂದ ಹಾನಿಗೊಂಡಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಸ್ತೆಗಳ ದುರಸ್ತಿ ಹಾಗೂ ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಸಕರ ಸಭೆ ನಡೆಯಲಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

English summary
Shiradi Ghat second phase road work is almost finished. Minister U.T.Khadar said that, Shiradi Ghat road will be open for the public within July 16th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X