ಶೀಘ್ರದಲ್ಲೇ ಶಿರಾಡಿ ಘಾಟ್ ಬೈಪಾಸ್ ಕಾಮಗಾರಿ : ಗಡ್ಕರಿ
ಮಂಗಳೂರು, ಡಿಸೆಂಬರ್ 16 : '2016ರ ಡಿಸೆಂಬರ್ ಅಂತ್ಯದೊಳಗೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಉದ್ದೇಶಿತ ಬೈಪಾಸ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು' ಎಂದು ಕೇಂದ್ರ ಬಂದರು ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಮಂಗಳವಾರ ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, 'ಕಾಮಗಾರಿಗೆ ಸಂಬಂಧಪಟ್ಟಂತೆ ಡಿಪಿಆರ್ ಸರ್ವೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 6 ಸುರಂಗಗಳು ಮತ್ತು 12 ಸೇತುವೆಗಳ ನಿರ್ಮಾಣಗೊಳ್ಳಲಿವೆ. ಯೋಜನೆಗೆ ಸುಮಾರು 12 ಸಾವಿರ ಕೋಟಿ ರೂ. ವೆಚ್ಚವಾಗಲಿದೆ' ಎಂದು ತಿಳಿಸಿದರು. [ಶೀಘ್ರದಲ್ಲೇ ಪುನಃ ಶಿರಾಡಿಯಲ್ಲಿ ವಾಹನ ಸಂಚಾರ ಬಂದ್]

'ಕೇಂದ್ರ ಸರ್ಕಾರದ ಸ್ಮಾರ್ಟ್‌ಪೋರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾಗಲಿರುವ ಬಳ್ಳಾರಿಯಿಂದ ಬೇಲೆಕೇರಿ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಹುಬ್ಬಳ್ಳಿ-ಅಂಕೋಲಾ ನಡುವೆ ಅರಣ್ಯಭಾಗದ ರಸ್ತೆ ವಿಸ್ತರಣೆ ಮಾಡಬೇಕು. ಈ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಕ್ಕಿಲ್ಲ' ಎಂದರು. [ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ : ಚಿತ್ರಗಳು]
ಕಟ್ಟಡ ಲೋಕಾರ್ಪಣೆ : ನಿತಿನ್ ಗಡ್ಕರಿ ಅವರು ನಂತರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪದವಿ ಮಹಾ ವಿದ್ಯಾಲಯದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿದರು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಬಳ್ಳಾರಿ ಸಂಸದ ಶ್ರೀರಾಮುಲು, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ನಾಗರಾಜ ಶೆಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












Click it and Unblock the Notifications