ಮಂಗಳೂರಿನ ಕಾರ್ ಸ್ಟ್ರೀಟ್ ನ ಬಟ್ಟೆಯಂಗಡಿಯಲ್ಲಿ ಶೂಟೌಟ್
ಮಂಗಳೂರು, ಡಿಸೆಂಬರ್ 8: ಮಂಗಳೂರಿನ ಬಟ್ಟೆಯಂಗಡಿಯೊಂದರ ಮೇಲೆ ಶುಕ್ರವಾರ ಶೂಟೌಟ್ ನಡೆದಿದ್ದು, ನಗರದಲ್ಲಿ ಆತಂಕ ಮೂಡಿಸಿದೆ. ಇಲ್ಲಿನ ಕಾರ್ ಸ್ಟ್ರೀಟ್ ನಲ್ಲಿರುವ ಸಂಜೀವ ಶೆಟ್ಟಿ ಬಟ್ಟೆ ಮಳಿಗೆಯಲ್ಲಿ ಈ ಘಟನೆ ನಡೆದಿದೆ.
ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ ನಡೆದಿದ್ದು, ಮಹಾಲಿಂಗ ನಾಯ್ಕ(35) ಗಾಯಗೊಂಡವರು. ಮತ್ತೊಬ್ಬರ ಕಾಲಿಗೆ ಗುಂಡು ತಗುಲಿದೆ. ಭೂಗತ ಪಾತಕಿಗಳು ಕೃತ್ಯ ಎಸಗಿರುವ ಶಂಕೆಯಿದ್ದು, ಹಫ್ತಾಕ್ಕಾಗಿ ದಾಳಿ ನಡೆಸಿರುವ ಸಾಧ್ಯತೆಯಿದೆ.

ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಪರಿಶೀಲನೆ ನಡೆಸಿದ್ದು, ಮಂಗಳೂರು ಬಂದರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications