Shiradi: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಕಿರು ಸೇತುವೆ ನೆಲಸಮ
ಮಂಗಳೂರು, ಮೇ 30: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಿರು ಸೇತುವೆ ಕುಸಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಶಿರಾಡಿ ಸಮೀಪದ ಎಂಜಿರ ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಎಂಜಿರ ಎಂಬಲ್ಲಿ ಕಿರು ಸೇತುವೆ ನಿರ್ಮಾಣ ಮಾಡಲಾಗಿತ್ತು. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಮಳೆಯಾಗುತ್ತಿದ್ದು, ಮಳೆಗೆ ನೀರು ಹರಿದು ಎಂಜಿರದಲ್ಲಿ ನಿರ್ಮಾಣ ಮಾಡಿದ ಕಿರು ಸೇತುವೆ ಕುಸಿದು ಬಿದ್ದಿದೆ ಎನ್ನಲಾಗಿದೆ.

ಕಳೆದ ರಾತ್ರಿ ಈ ಅನಾಹುತ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿದ್ದ ಕಿರು ಸೇತುವೆ ಕುಸಿದು ಬಿದ್ದಿರುವುದನ್ನು ಕಂಡು ಸಾರ್ವಜನಿಕರು ಕಳಪೆ ಕಾಮಗಾರಿಯ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ಸೇತುವೆ ಕುಸಿತದಿಂದ ಕಳಪೆ ಕಾಮಗಾರಿ ಸಾಬೀತಾಗಿದೆ ಎಂದು ವಾದಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದ್ದು, ಎಂಜಿರದ ಕಿರು ಸೇತುವೆ ಕುಸಿದು ಬೀಳಲು ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಬೇಕಿದೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications