Dharmasthala: ಶಿವರಾತ್ರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಗಮನಕ್ಕೆ

ಮಂಗಳೂರು, ಮಾರ್ಚ್ 06: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ.

ಮಹಾ ಶಿವರಾತ್ರಿಯ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಬಳ್ಳಾರಿ, ಚಿತ್ರದುರ್ಗ, ಉತ್ತರ ಕನ್ನಡ, ಬೆಂಗಳೂರು ಮತ್ತು ತುಮಕೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಈಗಾಗಲೇ ಭಕ್ತರು ತಮ್ಮ ತಮ್ಮ ಊರುಗಳಿಂದ ಧರ್ಮಸ್ಥಳದತ್ತ ಹೆಜ್ಜೆ ಹಾಕುತ್ತಿದ್ದಾರೆ.

Shree Kshetra Dharmasthala Administration Give Suggestions To Devotees

ಶಿವರಾತ್ರಿ ದಿನದಂದು ಶ್ರೀಮಂಜುನಾಥನ ದರ್ಶನ ಪಡೆಯಲು ಹೊರಟಿರುವ ಭಕ್ತಾಧಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಕೆಲವು ಸಲಹೆಗಳನ್ನು ನೀಡಲಾಗಿದೆ. ದೇವಾಲಯದ ಆಡಳಿತ ಮಂಡಳಿ ಭಕ್ತಾಧಿಗಳಿಗೆ ನೀಡಿರುವ ಸಲಹೆಗಳು ಈ ಕೆಳಗಿನಂತಿವೆ.

* ಪಾದಯಾತ್ರಿಗಳು ಮಾರ್ಗದ ಮಧ್ಯೆ ನಡೆಯಬೇಡಿ

*ರಸ್ತೆಯಲ್ಲಿ ವಾಹನ ದಟ್ಟಣೆ ಜಾಸ್ತಿ ಇರುವುದರಿಂದ ಕಡ್ಡಾಯವಾಗಿ ಉಡುವ ಬಟ್ಟೆಯ ಬೆನ್ನಿನಲ್ಲಿ / ತೋಳಿನಲ್ಲಿ / ತಲೆಯ ದಿರಿಸಿನಲ್ಲಿ ಪ್ರತಿಫಲಕ (Reflector) ಇರಲೇಬೇಕು.

*ಪಾದಯಾತ್ರೆಯಲ್ಲಿ ಬರುವಾಗ ಶಿವ ಪಂಚಾಕ್ಷರಿ ಮಂತ್ರ ಪಠಿಸುತ್ತಾ ಬನ್ನಿ.

*ನೀವು ವಾಸ್ತವ್ಯ ಇರುವ ಸ್ಥಳದಲ್ಲಿ ಮತ್ತು ದಾರಿಯಲ್ಲಿ ಬರುವಾಗ ಉಗುಳುವುದು, ಗಲೀಜು ಇತ್ಯಾದಿ ಮಾಡುವುದರಿಂದ ಇತರ ಸದ್ಭಕ್ತರನ್ನು ಹೀಯಾಳಿಸಿದಂತಾಗುತ್ತದೆ.

*ತಂಗುವ ಸ್ಥಳ/ಅಡುಗೆ ಮಾಡಿದ ಸ್ಥಳವನ್ನು ಸ್ವಯಂಸ್ಪೂರ್ತಿಯಿಂದ ಸ್ವಚ್ಛ ಮಾಡಿರಿ.

* ಪ್ಲಾಸ್ಟಿಕ್ ಬಾಟ್ಲಿ, ಕಸ-ಕಡ್ಡಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಬಾರದು. ಸ್ವಚ್ಛತೆ ಕಾಪಾಡಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಭಕ್ತಾಧಿಗಳಿಗೆ ಮನವಿ ಮಾಡಿದ್ದಾರೆ.

ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲೇ ಮಲಗಿದ ಧರ್ಮಸ್ಥಳ ಪಾದಯಾತ್ರಿಗಳು

ಚಿಕ್ಕಮಗಳೂರು: ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಿದ್ದು, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ನೂರಾರು ಭಕ್ತರು ವಿಶ್ರಾಂತಿ ಪಡೆಯುತ್ತಿದ್ದಾರೆ. ಸಾಗರೋಪಾದಿಯಲ್ಲಿ ಭಕ್ತರು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಆಗಮಿಸುತ್ತಿದ್ದಾರೆ. ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಪಾದಯಾತ್ರೆ ಕಷ್ಟವಾಗುವ ಹಿನ್ನೆಲೆಯಲ್ಲಿ ಸ್ಥಳೀಯರು ಭಕ್ತರಿಗೆ ವಿಶ್ರಾಂತಿ ಪಡೆಯಲು ಕೊಟ್ಟಿಗೆಹಾರ ಬಸ್ ನಿಲ್ದಾಣವನ್ನು ಶುಚಿಗೊಳಿಸಿ ನಿದ್ರಿಸಲು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಹಾಸನ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕುಣಿಗಲ್, ಬೆಂಗಳೂರು, ಕಡೂರು, ತರೀಕೆರೆ ಭಾಗದ ಭಕ್ತರು ರಾತ್ರಿ ಹಗಲು ಎನ್ನದೆ ಆಗಮಿಸಿದ್ದು, ಕೊಟ್ಟಿಗೆಹಾರ ಬಸ್ ನಿಲ್ದಾಣ ವಿಶ್ರಾಂತಿ ತೆಗೆದುಕೊಂಡು ನಂತರ ಪಾದಯಾತ್ರೆ ಮುಂದುವರೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+