ಕಟಿಲು : ಯಕ್ಷಗಾನ ತಿರುಗಾಟಕ್ಕೆ ಚಾಲನೆ, ಪಟ್ಲ ಸತೀಶ್ 4ನೇ ಮೇಳದಲ್ಲಿ
ಮಂಗಳೂರು, ನವೆಂಬರ್ 14 : ಶ್ರೀ ಕ್ಷೇತ್ರ ಕಟೀಲು ಶ್ರೀದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ 6 ಯಕ್ಷಗಾನ ಮೇಳಗಳ ತಿರುಗಾಟ ಕ್ಕೆ ಚಾಲನೆ ನೀಡಲಾಗಿದೆ. 2017-18 ನೇ ಸಾಲಿನ
ಶ್ರೀ ಕ್ಷೇತ್ರದ ಸೇವೆ ಬಯಲಾಟಗಳ ತಿರುಗಾಟ ಆರಂಭಗೊಂಡಿದೆ.
ಯಕ್ಷಗಾನ ರಂಗದ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಶ್ರೀ ಕ್ಷೇತ್ರದ ಮೇಳದಲ್ಲಿ ಸೇವೆ ಸಲ್ಲಿಸಲಿದ್ದಾರೆ. ಶ್ರೀ ಕ್ಷೇತ್ರ ಕಟೀಲಿನ 4 ನೇ ಮೇಳದಲ್ಲಿ ಹಿರಿಯ ಭಾಗವತರಾಗಿ ಪಟ್ಲ ಸತೀಶ್ ಶೆಟ್ಟಿ ಸೇವೆ ಸಲ್ಲಿಸಲಿದ್ದಾರೆ.

ಶ್ರೀ ಕ್ಷೇತ್ರ ಕಟೀಲಿನ ಅರ್ಚಕ ಅನಂತಪದ್ಮನಾಭ ಅಸ್ರಣ್ಣ 6 ಮೇಳಗಳ ಕಲಾವಿದರಿಗೆ ಗೆಜ್ಜೆ ನೀಡುವ ಮೂಲಕ ಮೇಳಗಳ ತಿರುಗಾಟಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಕಟೀಲಿನಲ್ಲಿ ನಿನ್ನೆ ಸಂಜೆ ಶ್ರೀ ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಗೆಜ್ಜೆ ಮುಹೂರ್ತ ನಡೆದು ಎಲ್ಲಾ 6 ಮೇಳಗಳ ಹನ್ನೆರಡು ಮಂದಿ ವೇಷಧಾರಿಗಳು ಭಾಗವತಿಕೆ ಹಿಮ್ಮೇಳಗಳ ಸಹಿತ ಯಕ್ಷ ನಾಟ್ಯ ಪ್ರದಕ್ಷಿಣೆ, ಗಣಪತಿ ಸನ್ನಿಧಿಯಲ್ಲಿ ಯಕ್ಷಗಾನ ನಾಟ್ಯ ಸೇವೆ ನಡೆಸಿದರು.
ಶ್ರೀ ಕ್ಷೇತ್ರದ 6 ಮೇಳಗಳ ದೇವರ ಪೆಟ್ಟಿಗೆ ಚಿನ್ನ, ಬೆಳ್ಳಿಯ ಕಿರೀಟ ಹಾಗೂ ಆಯುಧಗಳನ್ನು ದೇವಸ್ಥಾನದಲ್ಲಿ ಪೂಜಿಸಿ ಬಳಿಕ ಸರಸ್ವತಿ ಸದನದಲ್ಲಿನ ಚೌಕಿಯಲ್ಲಿ ಪೂಜೆ ಸಲ್ಲಿಸಲಾಯಿತು. 6 ಯಕ್ಷಗಾನ ಮೇಳಗಳ ತಿರುಗಾಟ ಆರಂಭದ ಮೊದಲ ಹಂತವಾಗಿ ಕ್ಷೇತ್ರದ ರಥಬೀದಿಯಲ್ಲಿ ನಿರ್ಮಿಸಲಾಗಿದ್ದ 6 ಯಕ್ಷ ರಂಗಗಳಲ್ಲಿ ನಿನ್ನೆ ರಾತ್ರಿ ಬಯಲಾಟ ಪ್ರದರ್ಶನ ನಡೆಯಿತು.

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದಿಂದ ಹೊರಡುವ ಆರೂ ಮೇಳಗಳು ಈ ಬಾರಿ ಹೊಸ ರೂಪದಿಂದ ಹೊರಡಲಿದೆ. 6 ಮೇಳಗಳಿಗೆ ಸುಮಾರು 20 ವರ್ಷಕ್ಕಾಗುವಷ್ಟು ಯಕ್ಷಗಾನಗಳೂ ಈಗಾಗಲೇ ಬುಕ್ಕಿಂಗ್ ಆಗಿವೆ. ಇವುಗಳಲ್ಲಿ ಸುಮಾರು 500 ಯಕ್ಷಗಾನ ಪ್ರದರ್ಶನಗಳು ಖಾಯಂ ಆಡಿಸುವ ಯಕ್ಷಗಾನವಾಗಿದೆ.

ಮೇಳಗಳ ತಿರುಗಾಟಕ್ಕಿದ್ದ ಬಸ್‍ಗಳೆಲ್ಲವೂ ಹಳೆಯದಾಗಿರುವುದರಿಂದ ಅವುಗಳ ಬದಲಿಗೆ ಈ ವರ್ಷದಿಂದ ಕಲಾವಿದರು ಹಾಗೂ ಸಿಬ್ಬಂದಿಗಳಿಗೆ ಉಪಯೋಗವಾಗುವಂತೆ ವಿಷೇಶವಾಗಿ ವಿನ್ಯಾಸಗೊಳಿಸಿದ ಹೊಸ ಬಸ್ಸುಗಳನ್ನು ಒದಗಿಸಲಾಗಿದೆ. ಜೊತೆಗೆ ಸಾಮಾಗ್ರಿಗಳ ಸಾಗಾಣಿಕೆಗೆ ಪ್ರತ್ಯೇಕ ಆರು ಲಾರಿಗಳನ್ನು ಮೇಳಕ್ಕೆ ನೀಡಲಾಗಿದ್ದು ಅದಲ್ಲದೇ ಸೇವಾದಾರರಿಗೆ ಉಪಯೋಗವಾಗುವಂತೆ ರಂಗಸ್ಥಳ ಮತ್ತು ಚೌಕಿಗೆ ವಿದ್ಯುದಲಂಕಾರ ಧ್ವನಿವರ್ಧಕಗಳನ್ನು, ಪ್ರತೀ ಮೇಳಕ್ಕೆ ಎರಡು ಹೊಸ ಜನರೇಟರ್ ಗಳನ್ನು ನೀಡಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications