• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಸೂ... ನೆಲ ಡೊಂಕು' ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

|

ಮಂಗಳೂರು ಆಗಸ್ಟ್ 31: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ಕುಣಿಯಲಾರದ ಸೂ...ನೆಲ ಡೊಂಕು ಅಂದಳಂತೆ' ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಎನ್ನುವ ಮಾತಿಗೆ ಧರ್ಮಸ್ಥಳದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕುಣಿಯಲಾರದ ಸೂ. ನೆಲ ಡೊಂಕು ಅಂದಳಂತೆ ಎನ್ನುವ ಉತ್ತರ ಕೊಟ್ಟಿದ್ದರು. ಸಿದ್ದರಾಮಯ್ಯ ಅವರ ಭಾರೀ ಟೀಕೆ ವ್ಯಕ್ತವಾಗಿತ್ತು. ಶ್ರೀ ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಯವರನ್ನು ಉದ್ದೇಶಿಸಿ ಮಾತು ಹೇಳಿರುವುದು.

ಮುಳುಗುತ್ತಿರುವ ಆರ್ಥಿಕ ಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ- ಸಿದ್ದರಾಮಯ್ಯ

ಇದು ಹಳ್ಳಿಯ ಸಾಮಾನ್ಯ ಗಾದೆ ಮಾತು. ಕುಣಿಯಲಾರದ ನೃತ್ಯಗಾರ್ತಿ ನೆಲಡೊಂಕು ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ. ಅವರಿಗೆ ವಿವಾದ ಮಾಡೋದೇ ಒಂದು ಕೆಲಸ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ಸೂ... ಟೊಂಕು ಹೇಳಿಕೆಗೆ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ ಖಂಡಿಸಿದ್ದು, ಸಿದ್ದರಾಮಯ್ಯ ಅವರ ಈ ಮಾತು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ಇವರು ಹೆಣ್ಣನ್ನು ಗೌರವಿಸುವ ಪರಿ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮೊದಲು ಸಿದ್ದರಾಮಯ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಾಲಯಕ್ಕೆ ತೆರಳಿ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ್ ರೈ, ಯು ಟಿ ಖಾದರ್ ಮತ್ತಿತರರು ಉಪಸ್ಥಿತರಿದ್ದರು.

English summary
Speaking to media persons in Dharmastha former chief minister Siddaramaiah clarification to his controversial statement
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X