• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುಳುಗುತ್ತಿರುವ ಆರ್ಥಿಕ ಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ- ಸಿದ್ದರಾಮಯ್ಯ

|

ಮಂಗಳೂರು, ಆಗಸ್ಟ್ 31: ಕೇಂದ್ರ ಸರ್ಕಾರದಿಂದ ಬ್ಯಾಂಕ್ ಗಳ ವಿಲೀನ ನಡೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಪ್ರತೀ ಕ್ಷೇತ್ರದಲ್ಲೂ ಕೇಂದ್ರ ಸರ್ಕಾರದ ಹಸ್ತಕ್ಷೇಪ ಜಾಸ್ತಿಯಾಗಿದೆ. ದೇಶದ ಅರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ" ಎಂದು ಆಕ್ರೋಶಗೊಂಡರು.

ತಹಶೀಲ್ದಾರ್ ಶ್ರಮದಿಂದ ನಿರ್ಗತಿಕ ಕುಟುಂಬಕ್ಕೆ ಸಿಕ್ಕಿತು 'ಬೆಳಕು'

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

"ದೇಶದ ಜಿಡಿಪಿ ಸ್ಥಿತಿ ಹದಗೆಟ್ಟಿದೆ. ದೇಶದ ಸಂಪತ್ತು ಕೆಳಮಟ್ಟಕ್ಕೆ ಹೋಗಿದೆ" ಎಂದು ಆರೋಪಿಸಿದರು. ಇದೇ ಸಂದರ್ಭ ಡಿ.ಕೆ.ಶಿವಕುಮಾರ್ ಅವರ ಇಡಿ ಸಂಕಷ್ಟದ ವಿಚಾರವಾಗಿಯೂ ಪ್ರತಿಕ್ರಿಯಿಸಿ, "ಡಿಕೆಶಿ ವಿರುದ್ಧ ಪಿತೂರಿ ನಡೆದಿದೆ. ಇಡಿಯನ್ನು ದುರ್ಬಳಕೆ ಮಾಡಲಾಗಿದೆ. ರಾಜಕೀಯ ದುರುದ್ದೇಶದಿಂದ ಹೀಗೆ ಮಾಡಲಾಗಿದೆ. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ" ಎಂದು ಆರೋಪಿಸಿದರು.

English summary
speaking to media persons in Mangaluru former C M Siddaramaiah slammed central government over D K Shivakumar ED issue
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X